ಉಡುಪಿ: ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಬಿರುಸಾಗಿ ಸಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. 16ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅವಧಿಗೂ ಮುನ್ನವೇ ಅಧಿಕ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಉಡುಪಿ ಜಿಲ್ಲೆಗೆ ಮುಂದಿನ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರವಾಸ ತಾಣಗಳಲ್ಲಿ, ನದಿ-ಸಮುದ್ರ ಭಾಗಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲು ಸೂಚಿಸಲಾಗಿದೆ. ಸಮುದ್ರ ಹಾಗೂ ನದಿ ತೀರದಲ್ಲಿ ವಾಸಿಸುವ ಜನರನ್ನು ಅಗತ್ಯ ಬಿದ್ದರೆ ಸ್ಥಳಾಂತರಕ್ಕೆ ವ್ಯವಸ್ಥೆ ಮಾಡಬೇಕು, ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರವನ್ನು ತೆಗೆಯಬೇಕು, ದಿನದ 24 ಗಂಟೆಯೂ ಕೂಡ ಸಹಾಯವಾಣಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳರ್ ಸೂಚನೆ ನೀಡಿದ್ದಾರೆ. ಅಲ್ಲದೇ ಸಾರ್ವಜನಿಕರೂ ಕೂಡ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿಕೊಂಡಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…