Featured

ಉಡುಪಿ:ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ:ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ,: “ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ ಕಾಯ್ದಿರಿಸಬೇಕು” ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಕರ್ನಾಟಕ ಜಾನುವಾರು ಹತ್ಯೆ ಪ್ರತಿಭಂದಕ ಮತ್ತು ಸಂರಕ್ಷಣೆ ನಿಯಮ 2020 ನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ರೈತರು ಮತ್ತು ಸಾರ್ವಜನಿಕರು ತಮ್ಮಲ್ಲಿನ ಅನುತ್ಪಾದಕ ಜಾನುವಾರುಗಳು, ಅಪಘಾತಗೊಂಡ ಜಾನುವಾರು, ಮತ್ತಿತರ ಜಾನುವಾರುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಿದಾಗ, ಅವುಗಳನ್ನು ಪೋಷಿಸಲು ಅನುಕೂಲವಾಗುವಂತೆ ಪ್ರತಿಯೊಂದು ತಾಲೂಕಿನಲ್ಲಿ ಗೋಶಾಲೆಗಳನ್ನು ಸ್ಥಾಪಿಸುವುದು ಅಗತ್ಯವಾಗಿದ್ದು, ಇದಕ್ಕಾಗಿ ಸೂಕ್ತ ಸ್ಥಳಾವಕಾಶವನ್ನು ಗುರುತಿಸಬೇಕು” ಎಂದು ಅಧಿಕಾರಿಗಳಿಗೆ ಡಿ.ಸಿ. ಸೂಚನೆ ನೀಡಿದರು.

“ಗೋಶಾಲೆಗಳನ್ನು ಆರಂಭಿಸುವ ಸಂದರ್ಭದಲ್ಲಿ, ಅದೇ ಸ್ಥಳದಲ್ಲಿ ಮೇವು ಬೆಳೆಯಲು ಸಾಧ್ಯವಿರುವಂತಹ ಜಾಗವನ್ನು ಗುರುತಿಸಬೇಕು” ಎಂದು ನೀಲಾವರ ಗೋಶಾಲೆಯ ಟ್ರಸ್ಟಿ ಡಾ.ಸರ್ವೋತ್ತಮ ಉಡುಪ ಹೇಳಿದರು.

“ಜಾನುವಾರುಗಳನ್ನು ಸಾಗಾಟ ಮಾಡುವಾಗ ಸಂಬಂಧಪಟ್ಟ ಎಲ್ಲಾ ಪ್ರಾಧಿಕಾರಗಳಿಂದ ಅನುಮತಿ ಪಡೆದ ಅಗತ್ಯ ದಾಖಲಾತಿಗಳನ್ನು ಜೊತೆಯಲ್ಲಿಯೇ ಇಟ್ಟುಕೊಂಡಿರಬೇಕು. ಇಲ್ಲವಾದಲ್ಲಿ ಜಾನುವಾರು ಮಾಲೀಕ, ವಾಹನ ಮಾಲೀಕ, ಚಾಲಕ, ಸಹಾಯಕ, ಜಾನುವಾರ ಸಾಗಾಟದ ಸಹಾಯಕ ಈ ಎಲ್ಲರ ಮೇಲೂ ಕ್ರಮ ಕೈಗೊಳ್ಳಲು ನಿಯಮದಲ್ಲಿ ಅವಕಾಶವಿದೆ. ಸಾಗಾಟ ಸಮಯದಲ್ಲಿ ಜಾನುವಾರುಗಳಿಗೆ ಯಾವುದೇ ಗಾಯಗಳಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಾಗಾಟದ ಮೊದಲು ಯಥೇಚ್ಛ ನೀರು/ ಆಹಾರ/ ಹಸಿ ಹುಲ್ಲು, ವಾಹನದಲ್ಲಿ ಸರಿಯಾದ ಗಾಳಿ ಬೆಳಕು ಇರುವಂತೆ ನೋಡಿಕೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಹೇಳಿದರು.

https://youtu.be/jL4wwiGD0ng

“ಜಾನುವಾರುಗಳ ಸಾಗಾಟಕ್ಕಾಗಿಯೇ ರೂಪಿಸಿರುವ ನಿಯಮಗಳನ್ವಯ, ಸೂಕ್ತ ವಾಹನದಲ್ಲಿ ಸಾಗಾಟ ಮಾಡಬೇಕು, ಸಾಗಾಟದ ವೇಗ ಗಂಟೆಗೆ 25 ಕಿ.ಮೀ ಮೀರುವಂತಿಲ್ಲ. ವಾಹನದಲ್ಲಿ ಪ್ರತೀ ಜಾನುವಾರುಗಳಿಗೆ ಪ್ರತ್ಯೇಕ ಕಂಪಾರ್ಟ್ಮೆಂಟ್ ರೀತಿಯಲ್ಲಿ ವ್ಯವಸ್ಥೆ ಮಾಡಬೇಕು. ಖಾಸಗಿ ವಾಹನಗಳಲ್ಲಿ ಈ ರೀತಿಯ ಮಾರ್ಪಾಡು ಮಾಡಿಕೊಳ್ಳಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಗತ್ಯ ಪರವಾನಗಿಯನ್ನು ನೀಡಬೇಕು. ವಾಹನಗಳಲ್ಲಿ ಜಾನುವಾರುಗಳ ಪ್ರಥಮ ಚಿಕಿತ್ಸೆ ಕಿಟ್ ಕಡ್ಡಾಯವಾಗಿ ಇರಬೇಕು. ರಾತ್ರಿ 8 ರಿಂದ ಬೆಳಗ್ಗೆ 6 ರ ವರಗೆ ಸಾಗಾಟ ನಿಷಿದ್ಧವಾಗಿದ್ದು, ಬೇಸಿಗೆ ಕಾಲದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ಸಾಗಾಟ ಮಾಡುವಂತಿಲ್ಲ” ಎಂದು ಡಿಸಿ ಜಿ.ಜಗದೀಶ್ ಹೇಳಿದರು.

“ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ನಿಯಮ 2020ರಲ್ಲಿ, ಜಿಲ್ಲೆಗೆ ಸಂಬಂಧಪಟ್ಟ ಆಕ್ಷೇಪಣೆ/ ಸಲಹೆಗಳನ್ನು ಸ್ವೀಕರಿಸಿ, ಸರ್ಕಾರಕ್ಕೆ ತಲುಪಿಸಬೇಕು” ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಹರೀಶ್ ತಮನಕರ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

https://fb.watch/3kFsRf5htv/

ಜಿಲ್ಲೆಗೆ ಹೊರ ರಾಜ್ಯದಿಂದ ಕೃಷಿ/ಹೈನುಗಾರಿಕೆ ಉದ್ದೇಶಗಳಿಗೆ ಜಾನುವಾರುಗಳನ್ನು ತರುವಾಗ ನಿಯಮಗಳಲ್ಲಿ ಸೂಕ್ತ ಅವಕಾಶ ನೀಡಬೇಕು. ಗೋಶಾಲೆಗಳಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಅನುಮತಿ, ಗೋಶಾಲೆಗಳ ಕಡ್ಡಾಯ ನೊಂದಣಿ, ಗೋಮಾಳ ಜಾಗದ ಅತಿಕ್ರಮಣ ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು. ಅನುಮತಿ ಇಲ್ಲದೇ ಜಾನುವಾರು ಸಾಗಾಟದ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳಲು ತಹಸೀಲ್ದಾರ್ ಮತ್ತು ಉಪ ವಿಬಾಗಾಧಿಕಾರಿಗಳಿಗೆ ಅಧಿಕಾರ ನೀಡುವುದು, ಗೋಶಾಲೆಗಳಲ್ಲಿನ ಪಾಲನಾ ದರ ಹೆಚ್ಚಳ ಮತ್ತಿತರ ಸಲಹೆಗಳನ್ನು ಸದಸ್ಯರು ತಿಳಿಸಿದರು.

ಸಭೆಯಲ್ಲಿ ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಪಶುಪಾಲನಾ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಪ್ರಾಣಿ ದಯಾ ಸಂಘದ ಸದಸ್ಯರು ಉಪಸ್ಥಿತರಿದ್ದರು

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago