ಉಡುಪಿ

ಉಡುಪಿ:ಡ್ರಗ್ಸ್‌ ಹಾವಳಿಗೆ ಬಿಜೆಪಿ ಸರಕಾರದ ವೈಫ‌ಲ್ಯವೇ ಕಾರಣ : ಕಾಂಗ್ರೆಸ್‌ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ -Vishwanews24

ಕೋವಿಡ್ 19 ಚಿಕಿತ್ಸಾ ಉಪಕರಣಗಳ ಖರೀದಿಯಲ್ಲಿ ನಡೆದ ಹಗರಣಗಳ ಬಗ್ಗೆ ಸೂಕ್ತ ತನಿಖೆಯಾಗಲಿ

ಉಡುಪಿ:ಡ್ರಗ್ಸ್‌ ಹಾವಳಿಗೆ ಬಿಜೆಪಿ ಸರಕಾರದ ವೈಫ‌ಲ್ಯವೇ ಕಾರಣ : ಕಾಂಗ್ರೆಸ್‌ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ -Vishwanews24

ಉಡುಪಿ: ಕೋವಿಡ್ 19 ಚಿಕಿತ್ಸಾ ಉಪಕರಣಗಳ ಖರೀದಿಯಲ್ಲಿ ನಡೆದ ಹಗರಣಗಳ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ರವಿವಾರ ನಡೆದ ಜಿಲ್ಲಾ ಕಾಂಗ್ರೆಸ್‌ ಸಮಿತಿ ಸಭೆಯಲ್ಲಿ ಅವರು ಮಾತ ನಾಡಿದರು.

ಕಾಂಗ್ರೆಸ್‌ ವತಿಯಿಂದ ಕೋವಿಡ್‌-19 ವಿರುದ್ಧ ಹೋರಾಡುವ ಆರೋಗ್ಯ ಅಭಯಹಸ್ತ ಯೋಜನೆ ಕಾರ್ಯಕ್ರಮಕ್ಕೆ ಪ್ರತೀ ಪಂಚಾಯತ್‌ ವ್ಯಾಪ್ತಿಯಲ್ಲಿ 2 ಜನ ಕೋವಿಡ್ 19 ವಾರಿಯರ್ ಪ್ರತಿಯೊಬ್ಬರನ್ನು ಸಂಪರ್ಕಿಸಬೇಕು. ಇವರಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು. ಅವರ ಆರೋಗ್ಯ ರಕ್ಷಣೆಗೆ ವಿಮಾ ಸವಲತ್ತುಗಳನ್ನೂ ನೀಡಲಾಗುವುದು.  ಪಕ್ಷದ ವತಿಯಿಂದ 400 ಮಂದಿ ವೈದ್ಯರು ಆನ್‌ಲೈನ್‌ ಮೂಲಕ ಜನರಿಗೆ ಆರೋಗ್ಯ ರಕ್ಷಣೆ ನೀಡಿದ್ದಾರೆ ಎಂದರು.


ಡ್ರಗ್ಸ್‌ ಹಾವಳಿಗೆ ಬಿಜೆಪಿ ಸರಕಾರದ ವೈಫ‌ಲ್ಯವೇ ಕಾರಣ ಎಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿರುವ ಸಲೀಂ ಅಹ್ಮದ್‌ ಅವರು ಬಿಜೆಪಿ ಕಾರ್ಯಕರ್ತೆಯಾಗಿರುವ ನಟಿ ರಾಗಿಣಿಯೇ ಡ್ರಗ್ಸ್‌ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ. ಈ ನಡುವೆ ಸಚಿವ ಸಿ.ಟಿ.ರವಿ ಅವರು ‘ನಮಗೆ ಒತ್ತಡ ಇದೆ’ ಎನ್ನುತ್ತಿದ್ದಾರೆ. ಅದು ಯಾವ ಕಾರಣಕ್ಕೆಂದು ತಿಳಿಯಬೇಕು. ಡ್ರಗ್ಸ್‌ ಹಾವಳಿಯಲ್ಲಿ ತೊಡಗಿಸಿಕೊಂಡಿರುವವರಿಗೆ ಕಠಿನ ಶಿಕ್ಷೆಯಾಗಬೇಕು  ಎಂದರು.

ನೆರೆ ಹಾವಳಿಯಲ್ಲಿ ಕಳೆದ ವರ್ಷ ಹಾಗೂ ಈ ವರ್ಷ ರಾಜ್ಯಕ್ಕೆ ಸಾವಿರಾರು ಕೋಟಿ ರೂ.ನಷ್ಟ ಉಂಟಾಗಿದೆ. ಆದರೆ ಕೇಂದ್ರ ಸರಕಾರದಿಂದ ಅತ್ಯಲ್ಪ ಪ್ರಮಾಣದ ಮೊತ್ತ ಬಿಡುಗಡೆಯಾಗಿದೆ. ಇನ್ನೂ ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರಕಾರ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಬೇಕೆಂದರು.

ಪಕ್ಷದ ಮುಖ್ಯ ಸಚೇತಕ ನಾರಾಯಣ ಸ್ವಾಮಿ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಪ್ರಮುಖರಾದ ಮಂಜುನಾಥ ಭಂಡಾರಿ, ಎಂ.ವಿ.ಗಫ‌ೂರ್‌, ವೆರೋನಿಕಾ ಕರ್ನೇಲಿಯೋ, ಶಾಹಿದ್‌, ಕಳ್ಳಿಗೆ ತಾರಾನಾಥ ಶೆಟ್ಟಿ, ಭಾಸ್ಕರ ರಾವ್‌ ಕಿದಿಯೂರು, ದಿನೇಶ್‌ ಪುತ್ರನ್‌, ಡಾ| ಸವಿತಾ ಶೆಟ್ಟಿ, ಗೀತಾ ವಾಗ್ಲೆ, ರೋಶನಿ ಒಲಿವೆರಾ, ವಿಶ್ವಾಸ್‌ ಅಮೀನ್‌, ಮೈರ್ಮಾಡಿ ಸುಧಾಕರ ಶೆಟ್ಟಿ, ಪ್ರಖ್ಯಾತ್‌ ಶೆಟ್ಟಿ, ಅಣ್ಣಯ್ಯ ಶೇರಿಗಾರ್‌ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಪ್ರಸ್ತಾವನೆಗೈದರು. ಜಿಲ್ಲಾ ಪ್ರ. ಕಾರ್ಯದರ್ಶಿ ಬಿ.ನರಸಿಂಹ ಮೂರ್ತಿ ಸ್ವಾಗತಿಸಿದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago