Featured

ಉಡುಪಿ:ನಿಯಮ ಉಲ್ಲಂಘಿಸಿದ ಖಾಸಗಿ ಬಸ್‌ ಚಾಲಕನಿಗೆ 13.500 ರೂ. ದಂಡ, ಡ್ರೈವಿಂಗ್ ಲೈಸನ್ಸ್ ಅಮಾನತು -Vishwanews24

ಉಡುಪಿ: ಉಡುಪಿಯಿಂದ ಮಂಗಳೂರಿಗೆ ಶನಿವಾರ ರಾತ್ರಿ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಮಿತಿಗಿಂತ ಅಧಿಕ ಪ್ರಮಾಣದಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ಸಾರಿಗೆ ನಿಯಮ ಉಲ್ಲಂಘಿಸಿದ ಚಾಲಕನಿಗೆ 13.500 ರೂ. ದಂಡ ವಿಧಿಸಲಾಗಿದೆ.

ಶನಿವಾರ ರಾತ್ರಿ 9.30ಕ್ಕೆ ಉಡುಪಿ ನಿಲ್ದಾಣದಿಂದ ಖಾಸಗಿ ಬಸ್ಸಿನಲ್ಲಿ ಜನರು ಪುಟ್ ಬೋರ್ಡ್, ಹಿಂಭಾಗದ ಏಣಿ ಮತ್ತು ಮೇಲ್ಬಾಗದಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಬಸ್ಸಿನ ಚಾಲಕ ಶೈಲೇಶ್‌ಗೆ ುಡುಕುತನ ಮತ್ತು ನಿರ್ಲಕ್ಷ್ಯತನ ಚಾಲನೆ ಆಪಾದನೆಯಡಿ ಕೋರ್ಟ್‌ಗೆ ಹಾಜರಾಗುವಂತೆ ಬುಧವಾರ ನೋಟಿಸ್ ನೀಡಿ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ, ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ಆಪಾದಿತ ಚಾಲಕನಿಗೆ 13,500 ರೂಪಾಯಿ ದಂಡ ವಿಧಿಸಿದೆ.

ಸೆ. ೨೧ ರ ರಾತ್ರಿ 9.30 ಗಂಟೆಗೆ ಉಡುಪಿ – ಮಂಗಳೂರು ಮಾರ್ಗವಾಗಿ ಸಂಚರಿಸುವ ಕೆಎ 20 ಬಿ 6657 ನೇ ಖಾಸಗಿ ಬಸ್ಸಿನಲ್ಲಿ ಜನರು ಪುಟ್ ಬೋರ್ಡ್, ಹಿಂಭಾಗದ ಏಣಿಯಲ್ಲಿ ಮತ್ತು ಮೇಲ್ಬಾಗದಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ಬಗ್ಗೆ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಸೆ.೨೫ ರಂದು ಪೊಲೀಸರು, “ನಿಯಮ ಉಲ್ಲಂಘಿಸಿ ಹೆಚ್ಚಿನ ಜನರನ್ನು ಸಾಗಿಸುತಿದ್ದ, ಪುಟ್ ಬೋರ್ಡನಲ್ಲಿ ಮತ್ತು ಬಸ್ಸಿನ ಹಿಂಭಾಗ ಹಾಗೂ ಮೇಲ್ಬಾಗಗಳಲ್ಲಿ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಬಗ್ಗೆ ದುಡುಕುತನ ಮತ್ತು ನಿರ್ಲಕ್ಷ್ಯತನದ ಚಾಲನೆ ಹಾಗೂ ಯಾವುದೇ ಸುರಕ್ಷತಾ ನಿಯಮಗಳನ್ನು ಪಾಲಿಸದೇ ಬಸ್ಸನ್ನು ಚಲಾಯಿಸಿದ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಅಲ್ಲದೆ ಬಸ್ಸನ್ನು ವಶಪಡಿಸಿಕೊಂಡ ಪೊಲೀಸರು ಮೋಟಾರು ವಾಹನ ಕಾಯ್ದೆಯಂತೆ ಪ್ರಕರಣ ದಾಖಲಿಸಿ,ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಚಾಲಕನ ಚಾಲನಾ ಅನುಜ್ಞಾ ಪತ್ರವನ್ನು ಅಮಾನತು ಪಡಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಪೊಲೀಸ್ ಇಲಾಖೆ ಶಿಫಾರಸ್ಸು ಮಾಡಿದೆ. ಬಸ್ಸಿನ ಮಾಲೀಕರಿಗೆ ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದೆ.

ಉಡುಪಿಯಿಂದ ಮಂಗಳೂರಿಗೆ ಸಂಚರಿಸುವ ದಿನದ ಕೊನೆಯ ಬಸ್ ಇದಾಗಿದ್ದು, ರಾತ್ರಿ ಸುಮಾರು 9.30ರ ಸುಮಾರಿಗೆ ಉಡುಪಿಯಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಮಂಗಳೂರಿನತ್ತ ಸಾಗಿದೆ. ಅದರೆ ಬಸ್ಸಿನಲ್ಲಿ ನಿಗದಿಗಿಂತ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಬಸ್ಸಿನ ಫುಟ್ ಬೋರ್ಡ್ ಹಾಗೂ ಹಿಂಬದಿಯ ಏಣಿಯಲ್ಲಿ ನೇತಾಡಿಕೊಂಡು ಹೋಗಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ಕಂಡು ಬಂದಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

12 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

17 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

17 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

17 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago