Featured

ಉಡುಪಿ:ನಿಯಮ ಉಲ್ಲಂಘಿಸುವ ಪ್ರಿಂಟಿ0ಗ್ ಪ್ರೆಸ್ ಗಳ ವಿರುದ್ದ ಕಠಿಣ ಕ್ರಮ : ಜಿಲ್ಲಾಧಿಕಾರಿ – Vishwanews24

ಉಡುಪಿ:ನಿಯಮ ಉಲ್ಲಂಘಿಸುವ ಪ್ರಿಂಟಿ0ಗ್ ಪ್ರೆಸ್ ಗಳ ವಿರುದ್ದ ಕಠಿಣ ಕ್ರಮ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಪ್ರಸ್ತುತ ವಿಧಾನಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗ ಸೂಚಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿ, ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರಗಳನ್ನು ಮುದ್ರಿಸಿದಲ್ಲಿ ಅಂತಹ ಮುದ್ರಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.

ಅವರು ಇಂದು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , ಜಿಲ್ಲೆಯ ಪ್ರಿಂಟಿAಗ್ ಪ್ರೆಸ್ ಮಾಲೀಕರು , ಪ್ಲೆಕ್ಸ್ ಮುದ್ರಕರು ಮತ್ತು ಅವರ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಪತ್ರ, ಫಲಕ ಪೋಸ್ಟರ್ ಬ್ಯಾನರ್ ಮುಂಭಾಗದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು, ಮೊಬೈಲ್ ಸಂಖ್ಯೆ ಮತ್ತು ಮುದ್ರಣ ಪ್ರತಿಗಳ ಸಂಖ್ಯೆ ನಮೂದಿಸಬೇಕು. ಯಾವುದೇ ಧರ್ಮ, ಜಾತಿ, ಭಾಷೆ, ಜನರ ಭಾವನೆಗೆ ಧಕ್ಕೆಯಾಗುವಂತಹ ವಿಷಯಗಳನ್ನು ಮುದ್ರಿಸಬಾರದು ಎಂದು ತಿಳಿಸಿದರು.

ಮುದ್ರಕರು ಪಾಂಪ್ಲೇಟಗಳು ಮತ್ತು ಪೋಸ್ಟರಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ದೃಢೀಕರಣ ಪಡೆದಿರಲೇಬೇಕು. ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು. ತಾವು ಮುದ್ರಿಸುವ ಒಂದು ಪ್ರತಿಯನ್ನು, ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಪ್ರಿಂಟಿAಗ್ ಪ್ರೆಸ್ ಮಾಲೀಕರು ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ (ಆರ್‌ಓ) ಗಳಿಗೆ ಸಲ್ಲಿಸಬೇಕು. ಯಾವುದೇ ಜಾತ್ರೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮುದ್ರಣವಾಗುವ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಹಾಕಬಾರದು ಎಂದು
ಸೂಚಿಸಿದರು.

ಮುದ್ರಣ ಕುರಿತ ಸೂಕ್ತ ಬಿಲ್ ಗಳನ್ನು ಇಟ್ಟುಕೊಂಡಿರಬೇಕು, ಮುದ್ರಣ ವೆಚ್ಚವನ್ನು ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಖರ್ಚು ವೆಚ್ಚಗಳಿಗೆ ಸೇರ್ಪಡೆ ಮಾಡುವುದರಿಂದ, ಅಗತ್ಯವಿದ್ದಲ್ಲಿ ಅವುಗಳನ್ನು ಹಾಜರುಪಡಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ತರಬೇತಿ ನಿರತ ಪ್ರೊಬೇಷನರಿ ಐ.ಎ.ಎಸ್.ಅಧಿಕಾರಿ ಯತೀಶ್, ಉಪಸ್ಥಿತರಿದ್ದರು. ಮಾಸ್ಟರ್ ಟ್ರೆöÊನರ್ ಡಾ.ಅಶೋಕ್ ಕಾಮತ್ , ಮುದ್ರಣ ಮತ್ತು ಪ್ರಿಂಟಿAಗ್ ಚುನಾವಣಾ ಆಯೋಗವು ಸೂಚಿಸಿರುವ ಮಾನದಂಡಗಳ ಕುರಿತಂತೆ ಮಾಹಿತಿ ನೀಡಿದರು. ಜಿಲ್ಲೆಯ ವಿವಿಧ ಪ್ರಿಂಟಿAಗ್ ಪ್ರೆಸ್ ಗಳ ಮಾಲೀಕರು , ಪ್ಲೆಕ್ಸ್ ಮುದ್ರಕರು ಮತ್ತು ಅವರ ಪ್ರತಿನಿಧಿಗಳು ಉಪಸ್ಥಿತರಿದ್ದರು.

Vishwa News 24

Recent Posts

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

6 minutes ago

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

19 minutes ago

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

36 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

52 minutes ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

1 hour ago

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

17 hours ago