ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡದೇ ಪಂಚಾಯತ್ ಮುಖ್ಯದ್ವಾರವನ್ನು ಬದಲಾವಣೆ ಮಾಡಿದ್ದು ಇದನ್ನು ಪ್ರಶ್ನಿಸಿದ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರ ಮೇಲೆ ಗ್ರಾಮ ಪಂಚಾಯತ್ ಅಧ್ಯಕ್ಷರು ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ಇದು ಖಂಡನೀಯವಾಗಿದೆ, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾದ ಸದಸ್ಯರು ಪಂಚಾಯತ್‌ನಲ್ಲಿ ನಡೆದ ತಪ್ಪನ್ನು ಪ್ರಶ್ನಿಸಿದ್ದಕ್ಕೆ ಸೂಕ್ತ ಉತ್ತರ ನೀಡದೇ ಉಡಾಫೆಯ ವರ್ತನೆಯನ್ನು ಬಿಜೆಪಿ ಬೆಂಬಲಿತ ಅಧ್ಯಕ್ಷರು ನಡೆಸಿಕೊಂಡು ಬಂದಿರುತ್ತಾರೆ, ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ಬಳಿಕ ಒಂದು ಸಾಮಾನ್ಯ ಸಭೆ ನಡೆದಿದ್ದು, ಈ ಸಭೆಯಲ್ಲಿ ಎಲ್ಲಿಯೂ ಕೂಡ ಪಂಚಾಯತ್‌ನ ಮುಖ್ಯ ದ್ವಾರವನ್ನು ಬದಲಿಸುವ ಕುರಿತು ವಿಷಯ ಪ್ರಸ್ತಾಪವಾಗಿಲ್ಲ. ಸಾಮಾನ್ಯ ಸಭೆಯಲ್ಲಿ ನಿರ್ಣಯಿಸದೆ ಇದ್ದರೂ ಮಾರ್ಚ್ 13 ಮತ್ತು 14 ರಂದು ಸರಕಾರಿ ರಜಾ ದಿನದ ಸಮಯದಲ್ಲಿ ಹಲವು ವರ್ಷಗಳಿಂದ ಇದ್ದ ಪಂಚಾಯತ್‌ನ ಮುಖ್ಯ ದ್ವಾರವನ್ನು ತೆಗೆದು ಕೆಂಪು ಕಲ್ಲು ಕಟ್ಟಿರುವುದು ಖಂಡನೀಯವಾಗಿದೆ ಎಂದು ತೆಂಕನಿಡಿಯೂರು ಪಂಚಾಯತ್ ಸದಸ್ಯ ಪ್ರಖ್ಯಾತ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಇದನ್ನೂ ಓದಿ : ಉಡುಪಿ :ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡುಬ0ದಲ್ಲಿ ಕಠಿಣ ಕ್ರಮ -Vishwanews24
ಪಂಚಾಯತ್ ವ್ಯವಸ್ಥೆ ಪಾರದರ್ಶಕವಾಗಿರಬೇಕಾಗಿದ್ದು ರಸ್ತೆಯ ಬದಿಗಿದ್ದು ಜನರಿಗೆ ಸುಗಮವಾಗಿ ಪ್ರವೇಶಿಸಲು ఇద్ద ಮುಖ್ಯದ್ವಾರವನ್ನು ತೆಗೆದು ಒಂದು ಮೂಲೆಯಲ್ಲಿ ಜನರಿಗೆ ನಡೆದಾಡಲು ಕೂಡ ಸಾಧ್ಯವಾಗದ ರೀತಿಯಲ್ಲಿ ಮುಖ್ಯದ್ವಾರವನ್ನು ನಿರ್ಮಿಸಿರುವ ಪಂಚಾಯತ್ ಬಿಜೆಪಿ ಆಡಳಿತ ಜನರಿಗೆ ತೊಂದರೆ ಮಾಡಲು ಹೊರಟಿದೆ. ಇದರ ಬಗ್ಗೆ ಈಗಾಗಲೇ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಸಾರ್ವಜನಿಕವಾಗಿರುವ ಪಂಚಾಯತ್‌ನ ಈ ಕಾಮಗಾರಿಯ ಬಗ್ಗೆ ಅನುಮಾನವಿದ್ದು, ಇದರ ಹಿಂದೆ ಇರುವ ವ್ಯಕ್ತಿಗಳು ಯಾರೇ ಇದ್ದರೂ ಕೂಡ ಅದನ್ನು ಹಿಂದೆ ಇದ್ದ ಹಾಗೆ ಮಾಡಿಸಿಕೊಡಬೇಕು, ನಮಗೆ ಲಭಿಸಿರುವ ಮಾಹಿತಿಗಳ ಪ್ರಕಾರ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಕೂರುವ ಕುರ್ಚಿ ಸದ್ಯ ವಾಸ್ತು ಪ್ರಕಾರವಾಗಿ ಇಲ್ಲವಾಗಿದ್ದು ಅದಕ್ಕಾಗಿ ಪಂಚಾಯತ್‌ನ ಮುಖ್ಯ ದ್ವಾರವನ್ನೇ ಬದಲಿಸಲಾಗಿದೆ ಎಂಬ ಗುಮಾನಿ ಇದೆ. ಪಂಚಾಯತ್ ಆಡಳಿತ ಈವರೆಗೆ ಸಾಂಗವಾಗಿ ನಡೆದಿದೆ ಯಾವುದೇ ರೀತಿಯ ಸಮಸ್ಯೆ ಯಾವುದೇ ಅಧ್ಯಕ್ಷರುಗಳಿಗೆ ಆಗಿಲ್ಲ. ಆದರೆ ಕಳೆದ ಆರು ವರ್ಷಗಳಲ್ಲಿ ಬಿಜೆಪಿ ಬೆಂಬಲಿತ ಆಡಳಿತ ಸಮಿತಿಯಿಂದ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಕೂಡ ನಡೆಯದೆ ಜನರಿಗೆ ತೊಂದರೆ ಮಾಡಲಾಗುತ್ತಿದೆ. ಈ ಬಗ್ಗೆ ಪಂಚಾಯತ್ ಆಡಳಿತ ಸಂಪೂರ್ಣ ನಿರ್ಲಕ್ಷ್ಯತನ ತೋರುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಹೋರಾಟ ಮಾಡಲಾಗುವುದು ಎಂದರು.
ಇದನ್ನೂ ಓದಿ : ಕಾರ್ಕಳ : ಹಿಂಜಾವೇ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ; ಬಜರಂಗದಳದ ಮೂವರು ಕಾರ್ಯಕರ್ತರ ಬಂಧನ -Vishwanews24
ಮುಖ್ಯ ದ್ವಾರವನ್ನು ಬದಲಿಸಿರುವ ಬಗ್ಗೆ ಮನವಿ ನೀಡಲು ಬಂದ 4 ಮಂದಿ ಸದಸ್ಯರ ವಿರುದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಜಾತಿ ನಿಂದನೆ ಪ್ರಕರಣ ದಾಖಲಿಸಿರುವ ಉದ್ದೇಶವೇನು? ಅಲ್ಲದೇ ತಮ್ಮ ಸಮಸ್ಯೆಯ ಬಗ್ಗೆ ದೂರು ನೀಡಲು ಬಂದ ಗ್ರಾಮಸ್ಥರಿಗೂ ಸಹ ಪಂಚಾಯತ್ ಅಧ್ಯಕ್ಷರು ಹೊರಗೆ ಹೋಗಲು ಹೇಳಿದ್ದು ಅವರ ವಿರುದ್ದ ಕೂಡ ಜಾತಿ ನಿಂದನೆ ದೂರು ದಾಖಲಿಸಿದ್ದಾರೆ. ಇದರ ಹಿಂದೆ ಕೆಲವೊಂದು ಕಾಣದ ಕೈಗಳ ಕೈವಾಡ ಕೂಡ ಇದ್ದು, ಶಾಂತಿಯುತವಾಗಿದ್ದ ತೆಂಕನಿಡಿಯೂರು ಗ್ರಾಮ ಪಂಚಾಯತ್‌ನ್ನು ಅಶಾಂತಿಯ ಗೂಡಾಗಿ ಪರಿವರ್ತಿಸಲು ಬಿಜೆಪಿ ಬೆಂಬಲಿತ ಆಡಳಿತ ಹೊರಟಿದ್ದು ಇದರ ವಿರುದ್ಧ ಸಂಘಟಿತ ಹೋರಾಟ ಮುಂದುವರೆಸಲಾಗುವುದು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಗೋಪಾಲ ಕೃಷ್ಣ ಶೆಟ್ಟಿ, ಯತೀಶ್ ಕರ್ಕೆರಾ,ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಶರತ್ ಶೆಟ್ಟಿ,ಅನುಷಾ ಆಚಾರ್ಯ ಉಪಸ್ಥಿತರಿದ್ದರು.
ಇದನ್ನೂ ಓದಿ : ಕೇಂದ್ರದ ಮಾಜಿ ಸಚಿವ `ದಿಲೀಪ್ ಕುಮಾರ್ ಗಾಂಧಿ ಕೊರೊನಾ ಸೋಂಕಿಗೆ ಬಲಿ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…