Featured

ಉಡುಪಿ:ಬಿಜೆಪಿ ಪೊರೈಸಲು ಸಾಧ್ಯವಾಗದ ಸುಳ್ಳು ಭರವಸೆಗಳ ಬಿಟ್ಟಿ ಭಾಗ್ಯಗಳನ್ನು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿದೆ :  ರಮೇಶ್ ಕಾಂಚನ್ – Vishwanews24

ಉಡುಪಿ:ಬಿಜೆಪಿ ಪೊರೈಸಲು ಸಾಧ್ಯವಾಗದ ಸುಳ್ಳು ಭರವಸೆಗಳ ಬಿಟ್ಟಿ ಭಾಗ್ಯಗಳನ್ನು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿದೆ :  ರಮೇಶ್ ಕಾಂಚನ್

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಟ್ಟಿ ಭಾಗ್ಯಗಳನ್ನು ನೀಡಿರುವವರಿಗೆ ಯಾವ ರೀತಿಯ ಗ್ಯಾರಂಟಿ ಇದೆ ಬದಲಾಗಿ ಇದು ಸುಳ್ಳು ಭರವಸೆಗಳ ಪ್ರಣಾಳಿಕೆಯಲ್ಲದೆ ಬೇರೆನು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಈ ಹಿಂದೆ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರ ನಡೆಸಿದಾಗ ನೀಡಿದ ಎಲ್ಲಾ ಭರವಸೆಗಳನ್ನು ಪೊರೈಸಿದ್ದು ಈ ಬಾರಿ ಕೂಡ ಅಧಿಕಾರಕ್ಕೆ ಬಂದರೆ ಜನರಿಗೆ ಉತ್ತಮ ಯೋಜನೆಯ ಗ್ಯಾರಂಟಿಯನ್ನು ನೀಡಿದ್ದು ಅದನ್ನು ಪೊರೈಸಲು ಬದ್ಧವಾಗಿದೆ. ಬಿಜೆಪಿಗರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿಕೊಂಡು ಬಂದಿದ್ದು ಈಗ ಪೊರೈಸಲು ಸಾಧ್ಯವಾಗದ ಸುಳ್ಳು ಭರವಸೆಗಳ ಬಿಟ್ಟಿ ಭಾಗ್ಯಗಳನ್ನು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿದೆ.

ಈ ಹಿಂದೆ ಇದೇ ಬಿಜೆಪಿ ಪಕ್ಷ ಗೋವಾ ಮತ್ತು ಉತ್ತರಪ್ರದೇಶ ರಾಜ್ಯದ ಚುನಾವಣೆಯಲ್ಲಿ ಕೂಡ 3 ಉಚಿತ ಸಿಲಿಂಡರ್ ನೀಡುವ ಭರವಸೆಯನ್ನು ನೀಡಿದ್ದು ಅಧಿಕಾರಕ್ಕೇರಿದ ನಂತರ ಆ ರಾಜ್ಯಗಳಲ್ಲಿ ಗ್ಯಾಸ್ ಇರುವ ಸಿಲಿಂಡರ್ ಇರಲಿ, ಕನಿಷ್ಠ ಖಾಲಿ ಸಿಲಿಂಡರ್‌ಗಳನ್ನೂ ಕೊಟ್ಟಿಲ್ಲ. ಈಗ ಅದೇ ನಾಟಕವನ್ನು ಕರ್ನಾಟಕದಲ್ಲಿ ಮಾಡಹೊರಟಿದ್ದು ಜನರನ್ನು ಮರಳು ಮಾಡುವ ಕೆಲಸ ಇದಾಗಿದೆ.

ಇಷ್ಟೇ ಅಲ್ಲದೆ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಪ್ರತಿಯೊಬ್ಬ ವ್ಯಕ್ತಿಗೆ 10 ಕೆಜಿ ಅಕ್ಕಿಯನ್ನು ನೀಡುತ್ತಿದ್ದು ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಅದನ್ನು ಮೊಟಕುಗೊಳಿಸಿದ್ದನ್ನು ಬಿಜೆಪಿಗರು ಮರೆತಿದ್ದಾರೆ. ಈಗಾಗಲೇ ನಂದಿನಿ ಹಾಲಿನ ಕೆಎಂಎಫ್ ಘಟಕವನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡಲು ಹೊರಟಿರುವ ಮೋದಿ ಸರಕಾರ ಕೇವಲ ಜನರ ಕಣ್ಣೊರೆಸುವ ನಿಟ್ಟಿನಲ್ಲಿ ಉಚಿತ ಹಾಲು ಪೊರೈಸುವ ಸುಳ್ಳು ಭರವಸೆ ನೀಡಿದೆ.

ಬಿಜೆಪಿಯ ಪ್ರಣಾಳಿಕೆ ಸಂಪೂರ್ಣ ಸುಳ್ಳಿನ ಕಂತೆಯಾಗಿದ್ದು ಕಳೆದ ಬಾರಿ ಅನ್ನಪೂರ್ಣ ಕ್ಯಾಂಟಿನ್ ತೆರೆಯುತ್ತೇವೆ ಎಂದು ಹೇಳಿ ಸಿದ್ದರಾಮಯ್ಯ ಸರಕಾರ ಆರಂಭಿಸಿದ್ದ ಇಂದಿರಾ ಕ್ಯಾಂಟಿನ್ ಮುಚ್ಚಿದ್ದರು. ಒಟ್ಟಾರೆ ಭರಪೂರ ಸುಳ್ಳು ಭರವಸೆಗಳನ್ನು ನೀಡಿ ಕರ್ನಾಟಕದ ಜನರ ಕಿವಿಯ ಮೇಲೆ ಹೂವು ಇಡುವ ಕೆಲಸವನ್ನು ಬಿಜೆಪಿ ಪ್ರಣಾಳಿಕೆಯಲ್ಲಿ ಮಾಡಿದ್ದು ಮುಗ್ಧ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸಿದ ಬಿಜೆಪಿಯನ್ನು ಒದ್ದೋಡಿಸಲು ಜನ ತೀರ್ಮಾನಿಸಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

4 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

12 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

12 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

13 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

13 hours ago