Featured

ಉಡುಪಿ:ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಿಎಂ ಬಳಿ ನಿಯೋಗ ; ಬ್ಯಾರಿ ಭಾಷೆ ಉಳಿವಿಗೆ ಲಿಪಿ ಅಗತ್ಯ: ರಹೀಂ ಉಚ್ಚಿಲ್ -Vishwanews24

ಉಡುಪಿ:ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಿಎಂ ಬಳಿ ನಿಯೋಗ ; ಬ್ಯಾರಿ ಭಾಷೆ ಉಳಿವಿಗೆ ಲಿಪಿ ಅಗತ್ಯ: ರಹೀಂ ಉಚ್ಚಿಲ್ -Vishwanews24

ಉಡುಪಿ: ಬ್ಯಾರಿ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಒತ್ತಾಯಿಸಿ ಮುಖ್ಯಮಂತ್ರಿ ಬಳಿ ನಿಯೋಗ ತೆರಳಿ ಒತ್ತಾಯಿಸಲಾಗುವುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದರು,.

ಬುಧವಾರ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಜಿಲ್ಲಾ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್‌ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾರಿ ಸಮುದಾಯದ ಹೋರಾಟದ ಫಲವಾಗಿ ಬ್ಯಾರಿ ಸಾಹಿತ್ಯ ಅಕಾಡೆಮಿ ರಚನೆಯಾಗಿದೆ. ಬ್ಯಾರಿ ಭಾಷೆಯ ಸಂಘಟನೆಯ ಹೆಸರಿನಲ್ಲಿ ಸಮುದಾಯ ಒಂದಾಗಬೇಕು. ಬ್ಯಾರಿ ಸಂಘಟನೆಗಳು ಧರ್ಮದ ಚೌಕಟ್ಟಿನೊಳಗೆ ಕಾರ್ಯ ನಿರ್ವಹಿಸಲು ಧರ್ಮಗುರುಗಳ ಮಾರ್ಗದರ್ಶನ ಅಗತ್ಯ ಎಂದರು.

ಸುರೇಶ್ ಅಂಗಡಿ ತಾಯಿ ವಿಧಿವಶ -Vishwanews24

1,400 ವರ್ಷಗಳ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಯ ಉಳಿವಿಗೆ ಲಿಪಿ ಅಗತ್ಯ. ಈವರೆಗೆ ಬ್ಯಾರಿ ಭಾಷೆಯ ಬರವಣಿಗೆಗೆ ಕನ್ನಡ ಅವಲಂಬಿಸಬೇಕಾಗಿತ್ತು. ಭಾಷೆಯ ಶ್ರೀಮಂತಿಕೆ ಉಳಿಸಲು, ಮುಂದಿನ ಜನಾಂಗ ಬ್ಯಾರಿ ಭಾಷೆಯನ್ನು ಕಲಿಯಲು ಅನುಕೂಲವಾಗುವಂತೆ ಲಿಪಿ ರಚನೆಯಾಗಿದೆ ಎಂದು ರಹೀಂ ಉಚ್ಚಿಲ್ ಹೇಳಿದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯಾಕುಬ್ ಖಾದರ್ ಗುಲ್ವಾಡಿ ಮಾತನಾಡಿ, ಇತರ ಭಾಷೆ ಮತ್ತು ಸಮುದಾಯದಗಳಿಗೆ ರಚನೆ ಮಾಡಿರುವಂತೆ ಬ್ಯಾರಿ ಭಾಷೆಗೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಯಾಗಬೇಕು. ಈ ನಿಟ್ಟಿನಲ್ಲಿ ಸಮುದಾಯದ ಪ್ರಮುಖರು ಒಟ್ಟಾಗಿ ಹೋರಾಟ ಮಾಡಬೇಕು. ಬ್ಯಾರಿ ಭಾಷೆಯ ಸಿನಿಮಾವನ್ನು ಬ್ಯಾರಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಮಂಗಳೂರು, ಉಡುಪಿ, ಚಿಕ್ಕಮಗಳೂರು, ಮೈಸೂರಿನಲ್ಲಿ ಪ್ರದರ್ಶಿಸಲು ಅಕಾಡೆಮಿ ಸಹಕಾರ ನೀಡಬೇಕು ಎಂದರು.

ಮಂಗಳೂರು : ಒಳಉಡುಪು, ಸ್ಯಾನಿಟರಿ ಪ್ಯಾಡ್ ಮತ್ತು ಸಾಕ್ಸ್ ಗಳಲ್ಲಿ ಚಿನ್ನ ಸಾಗಾಟ ; ವಿಮಾನ ನಿಲ್ದಾಣದಲ್ಲಿ ಮಹಿಳೆ ವಶಕ್ಕೆ -Vishwanews24

ಉಪನ್ಯಾಸಕ ಅಬೂಬಕ್ಕರ್ ಉಚ್ಚಿಲ ಪೆರ್ನಾಲ್ ಸೌಹಾರ್ದ ಸಂದೇಶ ನೀಡಿ, ಬ್ಯಾರಿಗಳ ಮೂಲ ವೃತ್ತಿ ವ್ಯಾಪಾರವಾಗಿದ್ದು, ವ್ಯವಹಾರ ಸುಗಮವಾಗಿ ನಡೆಯಬೇಕಾದರೆ ಸಮಾಜದಲ್ಲಿ ಸೌರ್ಹಾದತೆ ಅಗತ್ಯ. ಬ್ಯಾರಿಗಳು ಹಿಂದಿನಿಂದಲೂ ಸೌಹಾರ್ದ ಕಾಪಾಡಿಕೊಂಡು ಬರುತ್ತಿದ್ದು, ಸೌಹಾರ್ದತೆಯ ಬೇರುಗಳು ಗಟ್ಟಿಯಾಗಿ ಉಳಿದಿವೆ ಎಂದರು.

ಮುಖ್ಯ ಅತಿಥಿಗಳಾಗಿ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಪಿ.ಉಮರ್ ಫಾರೂಕ್, ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಬ್ಯಾರಿ, ಕರ್ನಾಟಕ ಹಜ್ ಸಮಿತಿಯ ಮಾಜಿ ಸದಸ್ಯ ಸಲೀಂ ಅಂಬಾಗಿಲು, ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ ಉಪಸ್ಥಿತರಿದ್ದರು. ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮ ಸ್ವಾಗತಿಸಿದರು. ಸದಸ್ಯ ಸಂಚಾಲಕ ನಝೀರ್ ಪೊಲ್ಯ ವಂದಿಸಿದರು. ಹುಸೇನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ಬ್ಯಾರಿ ಸಾಹಿತ್ಯ ಮತ್ತು ಸಂಸ್ಕೃತಿ ಸಂಘದ ಅಧ್ಯಕ್ಷ ಬಶೀರ್ ಬೈಕಂಪಾಡಿ ಇದ್ದರು.

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ ಆರೋಪ, ಜೊಮ್ಯಾಟೋ ಡೆಲಿವರಿ ಬಾಯ್ ಬಂಧನ -Vishwanews24

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

50 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

1 hour ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

2 hours ago