ಉಡುಪಿ: ಬ್ಯೂಟಿಪಾರ್ಲರ್ ನಡೆಸುವ ಮಹಿಳೆಯರ ಸ್ವಾವಲಂಬನೆಗೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಕರ್ನಾಟಕ ಐಕ್ಯ ಪಾರ್ಲರ್ ಮತ್ತು ಕ್ಷೌರಿಕ ಅಸೋಸಿಯೇಶನ್ ಮನವಿ ಸಲ್ಲಿಸಿದೆ.
ಅಸೋಸಿಯೇಶನ್ ಅಧ್ಯಕ್ಷೆ ಪೌಲಿನ್ ಕ್ರಾಸ್ತಾ, ಉಪಾಧ್ಯಕ್ಷೆ ಲತಿಸಿಯಾ ದಾಂತಿಸ್, ಖಜಾಂಜಿ ಗೀತಾ ಭಂಡಾರಿ, ಪಿಆರ್‌ಒ ಮಂಜುಳಾ ಡಿ. ನಾಯಕ್ ಅವರಿದ್ದ ನಿಯೋಗ ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದಾರೆ.
ಬ್ಯೂಟಿ ಪಾರ್ಲರ್ ನಡೆಸುತ್ತಿರುವ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಪಡೆಯಲು ಸರಕಾರದ ಸಹಾಯಧನ, ವಿಶೇಷ ಪ್ಯಾಕೇಜ್ ಸೌಲಭ್ಯಗಳು ಅತ್ಯವಶ್ಯಕವಾಗಿದೆ. ನಮ್ಮ ಸಂಘಟನೆಯಿಂದ ನಗರ, ಗ್ರಾಮೀಣ ಭಾಗದಲ್ಲಿರುವ ಬ್ಯೂಟಿಷಿಯನ್‌ಗಳಿಗೆ ಪ್ರೊಫೆಶನಲ್ ಮೇಕಪ್, ಹೇರ್ ಕಟ್ಟಿಂಗ್ ತರಗತಿ, ಸೆಮಿನಾರ್, ಬ್ಯೂಟಿಷಿಯನ್ ಕಾರ್ಯಾಗಾರ ನಡೆಸುತ್ತಿದ್ದೇವೆ. ಆದರೆ, ಬ್ಯೂಟಿ ಪಾರ್ಲರ್ ನಡೆಸುತ್ತಿರುವ ನಮಗೆ ಸರಕಾರದಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಪ್ರಸ್ತುತ ಬಜೆಟ್‌ನಲ್ಲಿ ಬ್ಯೂಟಿ ಪಾರ್ಲರ್‌ಗಳನ್ನು ನಡೆಸುತ್ತಿರುವ ಮಹಿಳೆಯರಿಗೆ ಅಗತ್ಯ ಸಹಾಯಧನ ಘೋಷಣೆ ಮಾಡುವ ಜೊತೆಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಅಧೀನದಲ್ಲಿರುವ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಬೆಂಗಳೂರು ಇದರ ವತಿಯಿಂದ ದೊರಕುವ ಸ್ವಾವಲಂಬನ ಯೋಜನೆ, ಇ.ಎಸ್.ಐ., ಪಿ.ಎಫ಼್. ಸೌಲಭ್ಯ ಒದಗಿಸುವಂತೆ ಮನವಿ ಮಾಡಿದ್ದಾರೆ.
ಪಾರ್ಲರ್ ನವೀಕರಣ, ಉಪಕರಣ ಖರೀದಿಗೆ ರಾಷ್ಟ್ರೀಕೃತ ಅಥವಾ ಸಹಕಾರಿ ಬ್ಯಾಂಕ್‌ಗಳಲ್ಲಿ ಶೂನ್ಯ ಅಥವಾ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುವುದು, ವಸತಿ ಯೋಜನೆಗೆ ವಿಶೇಷ ಅನುದಾನ ಮೀಸಲಿಡಬೇಕು, ನಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ವಿಶೇಷ ವಿದ್ಯಾರ್ಥಿ ವೇತನ ಘೋಷಿಸಬೇಕು ಮತ್ತು ಸ್ವೋದ್ಯೋಗಕ್ಕಾಗಿ ಸಬ್ಸಿಡಿ ಆಧಾರದಲ್ಲಿ ಸಾಲ ಸೌಲಭ್ಯ ಒದಗಿಸಬೇಕು ಎಂಬ ಬೇಡಿಕೆ ಸಲ್ಲಿಸಿದ್ದಾರೆ.
ಇದನ್ನೂ ಓದಿ :
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…