ಉಡುಪಿ:ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ ; ಲಕ್ಷಾಂತರ ರೂ. ನಷ್ಟ – vishwanews24

Featured, ಉಡುಪಿ

ಉಡುಪಿ:ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ ; ಲಕ್ಷಾಂತರ ರೂ. ನಷ್ಟ

ಉಡುಪಿ : ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಾ.1ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಘಟನೆಯಿಂದಾಗಿ ತ್ಯಾಜ್ಯ ಸಂಗ್ರಹಣೆ ವಾಹನವೊಂದು ಸ್ಫೋಟಗೊಂಡಿದೆ. ಸಂಪೂರ್ಣ ಎಸ್‌ಎಲ್‌ಆರ್‌ಎಂ ಘಟಕ ಬೆಂಕಿಗೆ ಆಹುತಿಯಾಗಿದ್ದು, ಭಾರಿ ನಷ್ಟವಾಗಿದೆ.

ಮಲ್ಪೆ, ಉಡುಪಿ, ಕುಂದಾಪುರದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಮತ್ತು ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತ್ತಿರದ ಇತರ ಪ್ರದೇಶಗಳಿಗೆ ವ್ಯಾಪಿಸದಂತೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಾರಂಬಳ್ಳಿ ಪಂಚಾಯಿತಿಗೆ ಸೇರಿದ್ದ ಈ ಎಸ್ ಎಲ್ ಆರ್ ಎಂ ಘಟಕ ಘಟಕದಲ್ಲಿದ್ದ ಎಲ್ಲಾ ಯಂತ್ರೋಪಕರಣಗಳು ಮತ್ತು ಉಪಕರಣಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.

Leave a Reply