Featured

ಉಡುಪಿ:ಮಳೆ ಹಾನಿ ಕಾಮಗಾರಿಗಳಿಗೆ ₹50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ – vishwanews24

ಉಡುಪಿ:ಮಳೆ ಹಾನಿ ಕಾಮಗಾರಿಗಳಿಗೆ ₹50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಲು 50 ಕೋಟಿ ರೂಪಾಯಿಗಳ ವಿಶೇಷ ಅನುದಾನ ನೀಡುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಅತಿಯಾದ ಮತ್ತು ಅಕಾಲಿಕ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಮೇ ತಿಂಗಳೊಂದರಲ್ಲೇ ಉಡುಪಿಯಲ್ಲಿ ಸರಾಸರಿ 166 ಮಿ.ಮೀ ನಷ್ಟು ಆಗಬೇಕಿದ್ದ ಮಳೆ, 837 ಮಿ.ಮೀ ಮಳೆಯಾಗಿದೆ. ಈ ಮೂಲಕ ಶೇ. 409ರಷ್ಟು ಮಳೆ ಹೆಚ್ಚಳವಾಗಿದೆ. ಜೂನ್ ತಿಂಗಳಿನಲ್ಲಿಯೂ ದಾಖಲೆ ಪ್ರಮಾಣದ ಮಳೆಯಾಗಿದ್ದು, ಇದು ದೇಶದಲ್ಲೇ ಅತಿ ಹೆಚ್ಚು ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕ್ಷೇತ್ರದ ಹಲವು ಭಾಗಗಳಲ್ಲಿ ವ್ಯಾಪಕ ಪ್ರವಾಹ ಉಂಟಾಗಿದ್ದು, ತುರ್ತು ಪರಿಹಾರ ಮತ್ತು ಪುನರ್ವಸತಿ ಕ್ರಮಗಳು ಅಗತ್ಯವಾಗಿದೆ. ಕಡಲತೀರದ ಹಲವು ಪ್ರದೇಶಗಳಲ್ಲಿ ಕಡಲ ಕೊರೆತ ಕಂಡುಬಂದಿದೆ. ಬಿರುಗಾಳಿ ಮತ್ತು ಭಾರೀ ಮಳೆಯಿಂದಾಗಿ ನೂರಾರು ಮರಗಳು ಧರೆಗುರುಳಿವೆ, ವಿದ್ಯುತ್ ಕಂಬಗಳು, ಮನೆಗಳು, ರಸ್ತೆಗಳು, ಚರಂಡಿಗಳು, ಶಾಲಾ ಕಟ್ಟಡಗಳು, ಸೇತುವೆಗಳು ಮತ್ತು ಸಣ್ಣ ಸೇತುವೆಗಳಿಗೆ ಹಾನಿಯಾಗಿದೆ.

ಕಳೆದ ಎರಡು ವರ್ಷಗಳಿಂದ ಪ್ರಕೃತಿ ವಿಕೋಪ ಪರಿಹಾರ ಯೋಜನೆಯಡಿ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಇದರಿಂದ ಗ್ರಾಮೀಣ ರಸ್ತೆಗಳ ನಿರ್ವಹಣೆ ಕಳಪೆಯಾಗಿದ್ದು, ಸಾರಿಗೆ ಸವಾಲುಗಳು ಉಲ್ಬಣಿಸಿವೆ. ಸಾರ್ವಜನಿಕ ಮೂಲಸೌಕರ್ಯಗಳನ್ನು ರಕ್ಷಿಸಲು ಮತ್ತು ದುರಸ್ತಿಪಡಿಸಲು ತುರ್ತು ಅಗತ್ಯವಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದರು. ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ನೈಸರ್ಗಿಕ ವಿಕೋಪ ಪರಿಹಾರದಡಿ 50 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಅನುಮೋದಿಸುವಂತೆ ಸಿಎಂಗೆ ಮನವಿ ಮಾಡಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago