Featured

ಉಡುಪಿ:ಮೀನುಗಾರಿಕಾ ಬೋಟ್‌ಗಳ ಡೀಸೆಲ್ ಮೇಲಿನ ರೋಡ್ ಸೆಸ್ ವಿನಾಯಿತಿಗಾಗಿ ಕೇಂದ್ರ ಹಣಕಾಸು ಸಚಿವರಿಗೆ ಮನವಿ : ಯಶ್‌ಪಾಲ್ ಸುವರ್ಣ -Vishwanews24

ಉಡುಪಿ:ಮೀನುಗಾರಿಕಾ ಬೋಟ್‌ಗಳ ಡೀಸೆಲ್ ಮೇಲಿನ ರೋಡ್ ಸೆಸ್ ವಿನಾಯಿತಿಗಾಗಿ ಕೇಂದ್ರ ಹಣಕಾಸು ಸಚಿವರಿಗೆ ಮನವಿ : ಯಶ್‌ಪಾಲ್ ಸುವರ್ಣ -Vishwanews24

ಉಡುಪಿ:ಮೀನುಗಾರಿಕಾ ಬೋಟ್‌ಗಳು ಬಳಸುವ ಡೀಸೆಲ್ ಮೇಲೆ ಕೇಂದ್ರ ಸರಕಾರ ವಿಧಿಸುತ್ತಿರುವ ರೋಡ್ ಸೆಸ್ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್, ಕೇಂದ್ರ ಮೀನುಗಾರಿಕೆ ಸಚಿವರಾದ ಶ್ರೀ ಗಿರಿರಾಜ ಸಿಂಗ್, ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ರಾಜ್ಯ ಮೀನುಗಾರಿಕೆ ಸಚಿವರಾದ ಶ್ರೀ ಅಂಗಾರ ಹಾಗೂ ಕರಾವಳಿಯ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಅನಂತ್ ಕುಮಾರ್ ಹೆಗ್ಡೆ ಹಾಗೂ ಬಿ. ವೈ. ರಾಘವೇಂದ್ರ ರವರಿಗೆ ಮನವಿ ಸಲ್ಲಿಸಿರುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫಡರೇಷನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಮೀನುಗಾರಿಕೆಯು ವಿದೇಶಿ ವಿನಿಮಯ, ಉದ್ಯೋಗಾವಕಾಶ ಹಾಗೂ ಪೌಷ್ಠಿಕಾಂಶವುಳ್ಳ ಆಹಾರದ ಪೂರೈಕೆಯ ಮೂಲಕ ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸಿ ದೇಶದ ಜಿಡಿಪಿಗೆ ೫% ಕೊಡುಗೆ ನೀಡುತ್ತಿದೆ.

ಯಾಂತ್ರೀಕೃತ ಮೀನುಗಾರಿಕಾ ಬೋಟ್‌ಗಳು ಇಂಧನವಾಗಿ ಡೀಸೆಲನ್ನು ಬಳಸುತ್ತಿದ್ದು, ಈ ಡೀಸೆಲ್ ಮೇಲೆ ಸರಕಾರ ರೋಡ್ ಸೆಸ್ ವಿಧಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಡೀಸೆಲ್ ಬೆಲೆಯಲ್ಲಿ ಗಣನೀಯವಾಗಿ ಏರಿಕೆಗೊಂಡಿರುವ ಹಿನ್ನಲೆಯಲ್ಲಿ ಮೀನುಗಾರರು ಆರ್ಥಿಕವಾಗಿ ತೀರ ಸಂಕಷ್ಟಕ್ಕೀಡಾಗಿದ್ದಾರೆ.

ಈಗಾಗಲೇ ಕೇಂದ್ರ ಸರಕಾರ ಮೀನುಗಾರರ ಬಹುದಶಕಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಮೀನುಗಾರಿಕೆ ಇಲಾಖೆಯನ್ನು ರೂಪಿಸಿ ಆತ್ಮನಿರ್ಭರ ಯೋಜನೆಯ ಮೂಲಕ ಮೀನುಗಾರಿಕೆ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಈ ಬಗ್ಗೆ ಸರಕಾರ ಸೂಕ್ತ ನಿರ್ಣಯ ತಳೆದು ಮೀನುಗಾರಿಕೆಗೆ ಬಳಸುವ ಡೀಸೆಲ್ ಮೇಲಿನ ರೋಡ್ ಸೆಸ್ ವಿನಾಯಿತಿ ನೀಡಲು ಕ್ರಮಕೈಗೊಳ್ಳುವ ಮೂಲಕ ಮೀನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ನೀಡುವಂತಾಗಲಿ ಎಂದುಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago