ಉಡುಪಿ:ಮೀನುಗಾರಿಕಾ ಬೋಟ್‌ಗಳು ಬಳಸುವ ಡೀಸೆಲ್ ಮೇಲೆ ಕೇಂದ್ರ ಸರಕಾರ ವಿಧಿಸುತ್ತಿರುವ ರೋಡ್ ಸೆಸ್ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್, ಕೇಂದ್ರ ಮೀನುಗಾರಿಕೆ ಸಚಿವರಾದ ಶ್ರೀ ಗಿರಿರಾಜ ಸಿಂಗ್, ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ರಾಜ್ಯ ಮೀನುಗಾರಿಕೆ ಸಚಿವರಾದ ಶ್ರೀ ಅಂಗಾರ ಹಾಗೂ ಕರಾವಳಿಯ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಅನಂತ್ ಕುಮಾರ್ ಹೆಗ್ಡೆ ಹಾಗೂ ಬಿ. ವೈ. ರಾಘವೇಂದ್ರ ರವರಿಗೆ ಮನವಿ ಸಲ್ಲಿಸಿರುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫಡರೇಷನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.
ಮೀನುಗಾರಿಕೆಯು ವಿದೇಶಿ ವಿನಿಮಯ, ಉದ್ಯೋಗಾವಕಾಶ ಹಾಗೂ ಪೌಷ್ಠಿಕಾಂಶವುಳ್ಳ ಆಹಾರದ ಪೂರೈಕೆಯ ಮೂಲಕ ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸಿ ದೇಶದ ಜಿಡಿಪಿಗೆ ೫% ಕೊಡುಗೆ ನೀಡುತ್ತಿದೆ.
ಯಾಂತ್ರೀಕೃತ ಮೀನುಗಾರಿಕಾ ಬೋಟ್‌ಗಳು ಇಂಧನವಾಗಿ ಡೀಸೆಲನ್ನು ಬಳಸುತ್ತಿದ್ದು, ಈ ಡೀಸೆಲ್ ಮೇಲೆ ಸರಕಾರ ರೋಡ್ ಸೆಸ್ ವಿಧಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಡೀಸೆಲ್ ಬೆಲೆಯಲ್ಲಿ ಗಣನೀಯವಾಗಿ ಏರಿಕೆಗೊಂಡಿರುವ ಹಿನ್ನಲೆಯಲ್ಲಿ ಮೀನುಗಾರರು ಆರ್ಥಿಕವಾಗಿ ತೀರ ಸಂಕಷ್ಟಕ್ಕೀಡಾಗಿದ್ದಾರೆ.
ಈಗಾಗಲೇ ಕೇಂದ್ರ ಸರಕಾರ ಮೀನುಗಾರರ ಬಹುದಶಕಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಮೀನುಗಾರಿಕೆ ಇಲಾಖೆಯನ್ನು ರೂಪಿಸಿ ಆತ್ಮನಿರ್ಭರ ಯೋಜನೆಯ ಮೂಲಕ ಮೀನುಗಾರಿಕೆ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಈ ಬಗ್ಗೆ ಸರಕಾರ ಸೂಕ್ತ ನಿರ್ಣಯ ತಳೆದು ಮೀನುಗಾರಿಕೆಗೆ ಬಳಸುವ ಡೀಸೆಲ್ ಮೇಲಿನ ರೋಡ್ ಸೆಸ್ ವಿನಾಯಿತಿ ನೀಡಲು ಕ್ರಮಕೈಗೊಳ್ಳುವ ಮೂಲಕ ಮೀನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ನೀಡುವಂತಾಗಲಿ ಎಂದುಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…