ಉಡುಪಿಯಲ್ಲಿ ಎಡೆ ಸ್ನಾನ, ಹಾಗೂ ಮಡೆ ಸ್ನಾನಕ್ಕೆ ವಿದಾಯ : ಪರ್ಯಾಯ ಪಲಿಮಾರು ಶ್ರೀಗಳ ದಿಟ್ಟ ನಿರ್ಧಾರ

Featured, ಉಡುಪಿ

ಉಡುಪಿ: ಕೃಷ್ಣಮಠದ ಇತಿಹಾಸದಲ್ಲೇ ಪರ್ಯಾಯ ಪಲಿಮಾರು ವಿದ್ಯಾಧೀಶ ಸ್ವಾಮೀಜಿಗಳು ಕ್ರಾಂತಿಕಾರಿ ಮತ್ತು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಈ ಬಾರಿಯಿಂದ ಷಷ್ಠಿಯಂದು ಮಠದ ಸುಬ್ರಹ್ಮಣ್ಯ ಗುಡಿಯ ಮುಂದೆ ಎಂಜಲೆಲೆಯ ಮಡೆಸ್ನಾನವೂ ಹಾಗೂ ದೇವರ ಪ್ರಸಾದ ಎಡೆಸ್ನಾನಕ್ಕೆರಡಕ್ಕೂ ವಿದಾಯ ಹೇಳಿದ್ದಾರೆ.

ಎಂಜಲೆಲೆಯ ಮಡೆಸ್ನಾನವೂ ಹಾಗೂ ದೇವರ ಪ್ರಸಾದ ಎಡೆಸ್ನಾನಕ್ಕೆರಡಕ್ಕೂ ಪಲಿಮಾರು ವಿದ್ಯಾಧೀಶ ಸ್ವಾಮೀಜಿಗಳು ವಿದಾಯ ಹೇಳಿದ್ದಾರೆ.ಪರ್ಯಾಯ ಪಲಿಮಾರು ಮಠಾಧೀಶರ ಮಹತ್ವದ ನಿರ್ಧಾರ ಇದಾಗಿದೆ. ಆಸಕ್ತ ಭಕ್ತರಿಂದ ಈ ಬಾರಿ ಕೇವಲ ಉರುಳುಸೇವೆ ಮಾತ್ರ ನಡೆದಿದೆ. ಉರುಳು ಸೇವೆ ಮಾಡಿದವರ ಸಂಖ್ಯೆಯೂ ಕಡಿಮೆಯಾಗಿತ್ತು. ಕಳೆದ ನಾಲ್ಕು ವರ್ಷದಿಂದ ಪೇಜಾವರ ಶ್ರೀಗಳ ಸಲಹೆಯಂತೆ ಮಠದಲ್ಲಿ ಎಡೆಸ್ನಾನ ನಡೆಯುತ್ತಿತ್ತು. ಆಗಲೇ ಭಕ್ತರ ಸಂಖ್ಯೆ ಕುಸಿದಿತ್ತು.

ಈ ಬಗ್ಗೆ ಮಾತನಾಡಿದ ಅವರು ‘ ಅನಗತ್ಯ ವಿವಾದ ಬೇಡವೆಂದು ಈ ನಿರ್ಧಾರ ಕೈಗೊಂಡಿದ್ದೇವೆ. . ಭಕ್ತರು ದೇವರಿಗೆ ಪ್ರದಕ್ಷಿಣೆ ಬಂದು ಅರ್ಚನೆ ಪೂಜೆ ಸಲ್ಲಿಸಲಿ. ಎಡೆಸ್ನಾನದಿಂದಲೂ ಕೆಲವರಿಗೆ ಬೇಸರವಾಗಿದೆ. ತಿನ್ನುವ ಅನ್ನದ ಮೇಲೆ ಉರುಳು ಸೇವೆ ಕೆಲವರಿಗೆ ಇಷ್ಟವಿಲ್ಲ. ಕೃಷ್ಣಮಠದ ಭೋಜನ ಶಾಲೆಯಲ್ಲೇ ಪ್ರಸಾದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.