Featured

ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಮಂಜೂರು ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಗೆ ಶಾಸಕ ಯಶ್ಪಾಲ್  ಮನವಿ – vishwanews24

ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಮಂಜೂರು ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಗೆ ಶಾಸಕ ಯಶ್ಪಾಲ್  ಮನವಿ

ಉಡುಪಿ ಭಾಗದ ಯುವ ಜನತೆಯ ಬಹುದಶಕದ ಬೇಡಿಕೆಯಾಗಿರುವ ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಯೋಜನೆ ಮಂಜೂರು ಮಾಡುವಂತೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ಯವರನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.

ಶಿಕ್ಷಣ ಕಾಶಿ ಎಂದು ಪ್ರಸಿದ್ಧಿ ಹೊಂದಿರುವ ಉಡುಪಿ ಜಿಲ್ಲೆಯು ಶೈಕ್ಷಣಿಕವಾಗಿ ನಿರಂತರ ಉತ್ತಮ ಫಲಿತಾಂಶದೊಂದಿಗೆ ಗಮನಾರ್ಹ ಸಾಧನೆ ಮಾಡಿಕೊಂಡು ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದೆ.

ಉಡುಪಿ ಜಿಲ್ಲೆಯು ಭೂ, ಜಲ, ರೈಲ್ವೇ ಮತ್ತು ವಾಯು ಸಾರಿಗೆಯ ಸಂಪರ್ಕದೊಂದಿಗೆ ನಾಲ್ಕು ವಿಧದ ಅತ್ಯುತ್ತಮ ಸಾರಿಗೆ ಸಂಪರ್ಕ ಹೊಂದಿದ ಜಿಲ್ಲೆಯಾಗಿದೆ. ಪ್ರವಾಸೋದ್ಯಮ, ಮೀನುಗಾರಿಕೆ ಧಾರ್ಮಿಕ ಕೇಂದ್ರ, ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್ ವ್ಯವಸ್ಥೆ, ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದೆ.

ಪ್ರತಿ ವರ್ಷವೂ ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪೂರ್ಣಗೊಳಿಸಿ, ತೇರ್ಗಡೆ ಹೊಂದುತ್ತಿದ್ದು, ಜಿಲ್ಲೆಯಲ್ಲಿ ವಿದ್ಯಾಭ್ಯಾಸಕ್ಕೆ ಸೂಕ್ತವಾದ ಉದ್ಯೋಗ ಅವಕಾಶ ದೊರಕದೆ, ಉದ್ಯೋಗ ಅರಸಿ ಹೊರ ಜಿಲ್ಲೆ ಯಾ ರಾಜ್ಯಗಳಿಗೆ ವಲಸೆ ಹೋಗುವ ಪರಿಸ್ಥಿತಿಯಿದೆ. ಜಿಲ್ಲೆಯ ಪ್ರತಿಭಾವಂತ ಪದವೀಧರರಿಗೆ ಸ್ಥಳೀಯವಾಗಿ ಉದ್ಯೋಗದ ಅವಕಾಶ ಕಲ್ಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ.

ಜಿಲ್ಲೆಯಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ, ಉದ್ಯೋಗ ಅರಸಿ ಹೊರ ಊರುಗಳಿಗೆ ವಲಸೆ ಹೋಗುವ ಪದವೀಧರರಿಗೆ ಜಿಲ್ಲೆಯಲ್ಲಿಯೇ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಮಾಹಿತಿ ತಂತ್ರಜ್ಞಾನ-ಜೈವಿಕ ತಂತ್ರಜ್ಞಾನ ಉದ್ಯಾನವನ (ಐಟಿ-ಬಿಟಿ ಪಾರ್ಕ್) ಯೋಜನೆ ಸರಕಾರದ ವತಿಯಿಂದ ಅಥವಾ ಖಾಸಗಿ ಸಹಭಾಗಿತ್ವದೊಂದಿಗೆ ಅನುಷ್ಠಾನಗೊಳಿಸಲು ವಿಶೇಷ ಮುತುವರ್ಜಿ ವಹಿಸಿ ಕ್ರಮ ವಹಿಸುವಂತೆ ಸಚಿವರಿಗೆ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago