Featured

ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಕಾರ್ಯಾಚರಣೆ : 8 ಜನರ ಬಂಧನ – vishwanews24

ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಕಾರ್ಯಾಚರಣೆ : 8 ಜನರ ಬಂಧನ

ಉಡುಪಿ: ಭಾರತೀಯ ಮಾದಕ ದ್ರವ್ಯ ನಿಯಂತ್ರಣ ಬ್ಯುರೋ (NCB) vನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ಜಾಲವನ್ನು ಬೇಧಿಸಿದ್ದು, ಎಂಟು ಜನರನ್ನು ಬಂಧಿಸಲಾಗಿದೆ. ಗ್ರಾಹಕರ ಕರೆಗಳನ್ನು ಸ್ವೀಕರಿಸಲು ಉಡುಪಿಯಲ್ಲಿ ಕಾಲ್ ಸೆಂಟರ್​ ಇದ್ದ ಶಂಕೆ ವ್ಯಕ್ತವಾಗಿದೆ. ತಮಿಳು ಮೂಲದ ಆರೋಪಿ ಜಾಯಲ್ ಅಲ್ಬಾ ಎಂಬಾತನನ್ನು ಎನ್​ಸಿಬಿ ಅಧಿಕಾರಿಗಳು ಉಡುಪಿಯಲ್ಲಿ ಬಂಧಿಸಿದ್ದಾರೆ.

ಭಾರತದ ಮಾದಕ ದ್ರವ್ಯ ನಿಯಂತ್ರಣ ಬ್ಯುರೋ ಕಳೆದ ಮೇ ತಿಂಗಳಲ್ಲಿ ‘ಆಪರೇಷನ್ ಮೇಡ್ ಮ್ಯಾಕ್ಸ್’ ಹೆಸರಲ್ಲಿ ಅಮೆರಿಕ, ಆಸ್ಟ್ರೇಲಿಯಾ, ಭಾರತ ಸೇರಿದಂತೆ ಹತ್ತಕ್ಕೂ ಹೆಚ್ಚು ದೇಶಗಳು ಮತ್ತು ನಾಲ್ಕು ಖಂಡಗಳಲ್ಲಿ ಕಾರ್ಯಚರಣೆಗೆ ಇಳಿದಿತ್ತು.

ದೆಹಲಿ, ಜೈಪುರ, ಉಡುಪಿ ಹಾಗೂ ರೂರ್ಕಿ ಎಲ್ಲಿ ನಡೆಸಿದ್ದ ಕಾರ್ಯಾಚರಣೆ ಬಗ್ಗೆ ಟ್ವೀಟ್ ಮಾಡುವ ಮೂಲಕ ಗ್ರಹ ಸಚಿವ ಅಮಿತ್ ಶಾ ಖಚಿತಪಡಿಸಿದ್ದರು. ಉಡುಪಿ ಸೇರಿದಂತೆ ನಾಲ್ಕು ಪಟ್ಟಣಗಳಿಂದ ಆರೋಪಿಗಳನ್ನು ಎನ್​ಸಿಬಿ ವಶಕ್ಕೆ ಪಡೆದಿತ್ತು. ಉಡುಪಿಯನ್ನು ಕೇಂದ್ರವಾಗಿಟ್ಟುಕೊಂಡು ಕಾಲ್ ಸೆಂಟರ್ ಮಾದರಿಯಲ್ಲಿ ಕಾರ್ಯಾಚರಿಸುತ್ತಿದ್ದ ಶಂಕೆ ವ್ಯಕ್ತವಾಗಿತ್ತು.

ವಿದೇಶಗಳಲ್ಲಿ ನಿಷೇಧಿತ ಔಷಧಿ (ನಾರ್ ಕೋಟಿಕ್ಸ್ ಒಳಗೊಂಡ) ಪೂರೈಸುವ ಜಾಲ ಇದಾಗಿದ್ದು, ಆನ್​ಲೈನ್​ಜಾಹೀರಾತು ಮತ್ತು ಫೋನ್ ಸಂಖ್ಯೆ ಹಂಚಿ ವಿದೇಶಗಳಲ್ಲಿ ಡ್ರಗ್ಸ್ ವಿತರಣೆ ಮಾಡಲಾಗುತ್ತಿತ್ತು. ಗ್ರಾಹಕರ ಕರೆಗಳನ್ನು ಸ್ವೀಕರಿಸಲು ಉಡುಪಿಯಲ್ಲಿ ಕಾಲ್ ಸೆಂಟರ್ ಇದ್ದ ಅನುಮಾನಗಳು ಮೂಡಿವೆ. ಉಡುಪಿಯಲ್ಲಿ ತಮಿಳು ಮೂಲದ ವ್ಯಕ್ತಿಯ ಮೂಲಕ ಕಾರ್ಯಾಚರಣೆ ನಡೆದಿತ್ತು. ಸದ್ಯ ಆತನ ಬಂಧನವಾಗಿದೆ. ದೆಹಲಿ ಮೂಲಕ ಇತರ ದೇಶಗಳಿಗೆ ಡ್ರಗ್ಸ್ ಸರಬರಾಜಾಗುತ್ತಿತ್ತು. ಒಂದು ತಿಂಗಳ ಹಿಂದೆ ಎನ್​ಸಿಬಿ ಅಧಿಕಾರಿಗಳಿಂದ ದೆಹಲಿ ಮೂಲದ ಮುಖ್ಯಸ್ಥ ನನ್ನು ಬಂಧಿಸಲಾಗಿತ್ತು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

13 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago