ಉಡುಪಿ : ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಸಿಂಗಲ್ ನಂಬರ್ ನಲ್ಲಿದ್ದ ಕೊರೊನಾ ಸೊಂಕಿತರ ಸಂಖ್ಯೆ ಕಳೆದ ನಾಲ್ಕು ದಿನಗಳಿಂದ ಹೆಚ್ಚಾಗುತ್ತಿದೆ.
ಇನ್ನು ಉಡುಪಿಯ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಾಗಿ ಮಣಿಪಾಲ ಕ್ಯಾಂಪಸ್ ನಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳಿಂದಲೇ ಬಂದಿದೆ. ಈಗಾಗಲೇ ಮಣಿಪಾಲ ಕ್ಯಾಂಪಸ್ ನಲ್ಲಿ ಒಟ್ಟು 95 ಕೇಸುಗಳು ಪತ್ತೆಯಾಗಿದ್ದು, ಮಣಿಪಾಲ ಕ್ಯಾಂಪಸ್ಸನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿದ ಉಡುಪಿ ಡಿಹೆಚ್ ಓ ಡಾ. ಸುಧೀರ್ ಚಂದ್ರ ಸೂಡಾ ಎಂಐಟಿ ಕ್ಯಾಂಪಸ್ ನ 5000 ವಿದ್ಯಾರ್ಥಿಗಳಿಗೆ ಕೊರೋನಾ ಟೆಸ್ಟ್ ನ್ನು ಒಂದು ವಾರದಿಂದ ನಿರಂತರ ಮಾಡಲಾಗುತ್ತಿದೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯ ನಗರ ಭಾಗದಲ್ಲಿ ಹೆಚ್ಚು ಪಾಸಿಟಿವ್ ಕೇಸುಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕ ಸ್ಥಳ, ಸಮಾರಂಭಗಳಲ್ಲಿ ಸಾರ್ವಜನಿಕರು ನಿಗಾವಹಿಸಿ ಮಾಸ್ಕ್ ಸಾಮಾಜಿಕ ಅಂತರ ಕಾಪಾಡಬೇಕೆಂದು ಡಿಎಚ್‌ಓ ತಿಳಿಸಿದ್ದು. ಉಡುಪಿಯಲ್ಲಿ ಕೊರೊನಾ ಎರಡನೇ ಅಲೆ ಮರುಕಳಿಸಲು ಅವಕಾಶ ಕೊಡಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮಣಿಪಾಲದ ಎಂಐಟಿ ಕ್ಯಾಂಪಸ್ ಕಂಟೈನ್ಮೆಂಟ್ ಮಾಡಿರೋದ್ರಿಂದ ವಿದ್ಯಾರ್ಥಿಗಳ ರೆಗ್ಯುಲರ್ ಕ್ಲಾಸ್ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿಗಳು ಮಣಿಪಾಲ ವಿವಿಗೆ ಸೂಚನೆ ಕೊಟ್ಟಿದ್ದಾರೆ.
ಆನ್ಲೈನ್ ತರಗತಿಗಳನ್ನು ತೆಗೆದುಕೊಳ್ಳಲು ಆದೇಶಿಸಿದ್ದಾರೆ. ಕ್ಯಾಂಪಸ್ ನಲ್ಲಿರುವ ವಿದ್ಯಾರ್ಥಿಗಳು ಹೊರಹೋಗಬಾರದು. ಸಾರ್ವಜನಿಕರ ಜೊತೆ ಬೆರೆಯಬಾರದು ಎಂದು ಖಡಕ್ ಎಚ್ಚರಿಕೆ ರವಾನಿಸಲಾಗಿದೆ.
ಇದನ್ನೂ ಓದಿ : ತಮಿಳುನಾಡು : ಅರಾವಕುರಿಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈ ನಾಮಪತ್ರ ಸಲ್ಲಿಕೆ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…