ಉಡುಪಿ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಗ್ಲಾಮರ್ ಸಚಿವೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.. ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಯಮಾಲಾ ಉಡುಪಿ ಜಿಲ್ಲಾ ಉಸ್ತುವಾರಿಯ ಜವಬ್ದಾರಿ ತೆಗೆದುಕೊಂಡ ಬಳಿಕ ಇಲ್ಲಿ ಅವರದ್ದೇ ಹವಾ ಕ್ರೀಯೆಟ್ ಆಗಿದೆ. ಸಚಿವೆ ಜಯಮಾಲಾರಷ್ಟು ಗ್ಲಾಮರ್ ಯಾರಿಗಿದೆ, ಎಂದು ಸಚಿವೆಯನ್ನು ಮಾಜಿ ಸಚಿವರು ಹಾಡಿ ಹೊಗಳಿದ್ದಾರೆ.
‘ ಉಡುಪಿಯಲ್ಲಿ ಜಯಮಾಲಾ ಗಾಳಿ ಎದ್ದಿದೆ. ಜಯಮಾಲಾರಷ್ಟು ಗ್ಲ್ಯಾಮರ್ ಯಾರಿಗಿದೆ.? ವೆರೀ ಗ್ಲ್ಯಾಮರಸ್ ಡಿಸ್ಟ್ರಿಕ್ಟ್ ಮಿನಿಸ್ಟರ್. ನನಗಿಂತ ಅವರೇ ಹೆಚ್ಚು ಗ್ಲ್ಯಾಮರಸ್ ಆಗಿದ್ದಾರೆ ‘ ಎಂದು ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ ನೀಡಿದ್ದಾರೆ.
ಸೂರ್ಯ ಚಂದ್ರ ಇರುವ ತನಕ ಕಾಂಗ್ರೆಸ್ ಪಕ್ಷ ಇರಲಿದೆ
‘ ಕಾಂಗ್ರೆಸ್ ಪಕ್ಷ ಆನೆ ಇದ್ದ ಹಾಗೆ, ಎಷ್ಟು ಚಿಕ್ಕ ಚಿತ್ರ ಬರೆದರೂ ಅದು ಆನೆಯೇ, ಸೂರ್ಯಚಂದ್ರ ಇರುವ ತನಕ ಕಾಂಗ್ರೆಸ್ ಇರುತ್ತದೆ ಕಾಂಗ್ರೆಸ್ ಪಕ್ಷವನ್ನು ಯಾರಿಂದಲೂ ಅಳಿಸಲು ಸಾಧ್ಯವೇ ಇಲ್ಲ, ಕಾಂಗ್ರೆಸ್ ಬಹಳ ಪ್ರಾಚೀನವಾದ ಪಕ್ಷ, ನಾನು ಬಿಟ್ಟರೂ ಕಾಂಗ್ರೆಸ್ ಪಕ್ಷ ಉಳಿಯುತ್ತದೆ ‘ ಎಂದು ಮಧ್ವರಾಜ್ ಹೇಳಿದ್ದಾರೆ.
‘ ಯಾರು ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷವನ್ನು ಮುಕ್ತ ಮಾಡಲು ಅಸಾಧ್ಯ. ಹಾಗಂತ ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ. ಚುನಾವಣಾ ವಾತಾವರಣ ಕಾಂಗ್ರೆಸ್ ಪರವಾಗಿದೆ. ಬಿಜೆಪಿ ಶಾಸಕರ ಹಣೆಬರಹ ಏನಂತ ಜನಕ್ಕೆ ಗೊತ್ತಾಗಿದೆ ಈಗ ‘ ಎಂದಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…