ಉಡುಪಿಯಲ್ಲಿ ಡೆಡ್ಲಿ ಶಂಕಿತ ಕೊರೋನ, ಕಾರ್ಕಳದ ವ್ಯಕ್ತಿ ಜಿಲ್ಲಾಸ್ಪತ್ರೆಗೆ ದಾಖಲು -Vishwanews24

ಉಡುಪಿಯಲ್ಲಿ ಡೆಡ್ಲಿ ಶಂಕಿತ ಕೊರೋನ, ಕಾರ್ಕಳದ ವ್ಯಕ್ತಿ ಜಿಲ್ಲಾಸ್ಪತ್ರೆಗೆ ದಾಖಲು -Vishwanews24 

ಉಡುಪಿ, : ಇಸ್ರೇಲಿನಿಂದ ಹಿಂದಿರುಗಿದ ಕಾರ್ಕಳ ತಾಲೂಕು ಮುನಿಯಾಲಿನ 75ರ ಹರೆಯ ವ್ಯಕ್ತಿಯೊಬ್ಬರು ಶಂಕಿತ ಕೊರೋನ ವೈರಸ್ ಪರೀಕ್ಷೆಗಾಗಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿರುವ ಪ್ರತ್ಯೇಕಿತ ವಾರ್ಡ್‌ಗೆ ಕಳೆದ ರಾತ್ರಿ ದಾಖಲಾಗಿದ್ದಾರೆ.

ತನ್ನ ಪತ್ನಿಯೊಂದಿಗೆ ಇಸ್ರೇಲಿನಲ್ಲಿ ಉದ್ಯೋಗದಲ್ಲಿರುವ ಪುತ್ರನ ಬಳಿ ತೆರಳಿದ್ದ ಇವರು ಬುಧವಾರ ಅಪರಾಹ್ನವಷ್ಟೇ ಸ್ವದೇಶಕ್ಕೆ ಮರಳಿದ್ದರು. ಕೆಮ್ಮು ಹಾಗೂ ನೆಗಡಿ ಇದ್ದ ಇವರ ಬಗ್ಗೆ ಮಾಹಿತಿ ಪಡೆದ ಜಿಲ್ಲಾಸ್ಪತ್ರೆಯ ಕಾರ್ಯಪಡೆ, ಅವರ ಮನೆಗೆ ತೆರಳಿ ತಡ ರಾತ್ರಿ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ತೆರೆದಿರುವ ವಿಶೇಷ ವಾರ್ಡ್‌ಗೆ ದಾಖಲು ಮಾಡಿದೆ.

ಇದೀಗ 75ರ ಹರೆಯದ ವ್ಯಕ್ತಿಯ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರು ಮೆಡಿಕಲ್ ಕಾಲೇಜಿನ ಪ್ರಯೋಗಾಲಯಕ್ಕೆ ಈಗಾಗಲೇ ರವಾನಿಸಲಾಗಿದೆ. ಶನಿವಾರದೊಳಗೆ ಇದರ ಪರೀಕ್ಷಾ ವರದಿ ಬರುವ ನಿರೀಕ್ಷೆ ಇದೆ ಎಂದು ಜಿಲ್ಲಾಸ್ಪತ್ರೆ ಮೂಲಗಳು ತಿಳಿಸಿವೆ.

ವೃದ್ಧರು ಅಧಿಕ ರಕ್ತದೊತ್ತಡ, ಮಧುಮೇಹದೊಂದಿಗೆ ಲಘುವಾದ ಅಸ್ತಮಾ ಸಮಸ್ಯೆಯನ್ನು ಹೊಂದಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾವು ಅವರನ್ನು ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡ್‌ಗೆ ದಾಖಲು ಮಾಡಿದ್ದೇವೆ. ಅವರೊಂದಿಗೆ ತೆರಳಿದ್ದ ಪತ್ನಿ ಸಂಪೂರ್ಣ ಆರೋಗ್ಯದಿಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

Vishwa News 24

Recent Posts

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

2 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

2 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

21 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

23 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

24 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

24 hours ago