Featured

ಉಡುಪಿಯಲ್ಲಿ ನಾನು ಪ್ರಾಮಾಣಿಕ ರಾಜಕೀಯ ಮಾಡಿದ್ದೇನೆ : ಶೋಭಾ ಕರಂದ್ಲಾಜೆ ಭಾವುಕ – Vishwanews24

ನಾನು ಉಡುಪಿ-ಚಿಕ್ಕಮಗಳೂರು ಜಿಲ್ಲೆಯವಳಲ್ಲ ಆದರೂ ನನ್ನನ್ನು ಎರಡು ಬಾರಿ ನೀವು ಗೆಲ್ಲಿಸಿದ್ದೀರಿ..

ನೀವೆಲ್ಲರೂ ಕೆಲಸ ಮಾಡಿ ಗೆಲ್ಲಿಸಿದ ಕಾರಣಕ್ಕೆ ಇಂದು ನಾನು ಕೇಂದ್ರ ಸಚಿವೆಯಾಗಿದ್ದೇನೆ..

ಯಾರ ಬಳಿಯಲ್ಲೂ ಒಂದು ಚಹಾ ಕುಡಿದಿಲ್ಲ..

ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದೇನೆ..

ನೀವು ಕೊಟ್ಟ ವೋಟಿಗೆ ಮಾನ ಮರ್ಯಾದೆ ಬರುವಂತೆ ನಡೆದುಕೊಂಡಿದ್ದೇನೆ..

ಉಡುಪಿಯಲ್ಲಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿದ ಶೋಭಾ ಕರಂದ್ಲಾಜೆ

ಉಡುಪಿ: ನನ್ನನ್ನು ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ನೀವೆಲ್ಲರೂ ಕೆಲಸ ಮಾಡಿ ಗೆಲ್ಲಿಸಿದ ಕಾರಣಕ್ಕೆ ಇಂದು ನಾನು ಕೇಂದ್ರ ಸಚಿವೆಯಾಗಿದ್ದೇನೆ. ನನ್ನನ್ನು ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ಮೋದಿಯವರು ನನ್ನನ್ನು ಗುರುತಿಸಿ ಕೆಲಸ ಕೊಟ್ಟಿದ್ದಾರೆ ಎಂದು ಶೋಭಾ ಕರಂದ್ಲಾಜೆ ಭಾವುಕರಾಗಿ ಹೇಳಿದರು.

ಉಡುಪಿಯಲ್ಲಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದೇನೆ. ಒಬ್ಬ ಗುತ್ತಿಗೆದಾರನನ್ನು ಕೂಡ ನಾನು ಮಾತನಾಡಿಸಿಲ್ಲ. ಇನ್ನೊಬ್ಬರ ಮುಂದೆ ಕೈ ಚಾಚದೆ ಕೆಲಸ ಮಾಡುತ್ತಿದ್ದೇನೆ ಎಂದರು.

ವ್ಯವಹಾರ ಮಾಡದೆ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ನೀವು ಕೊಟ್ಟ ವೋಟಿಗೆ ಮಾನ ಮರ್ಯಾದೆ ಬರುವಂತೆ ನಡೆದುಕೊಂಡಿದ್ದೇನೆ. ಯಾರ ಬಳಿಯಲ್ಲೂ ಒಂದು ಚಹಾ ಕುಡಿದಿಲ್ಲ. ಅತ್ಯಂತ ಪ್ರಾಮಾಣಿಕವಾಗಿ ನನ್ನ ರಾಜಕಾರಣ ಮಾಡಿದ್ದೇನೆ. ಉಡುಪಿಯಲ್ಲಿ ನಾನು ಪ್ರಾಮಾಣಿಕ ರಾಜಕೀಯ ಮಾಡಿದ್ದೇನೆ. ನೀವೆಲ್ಲ ದುಡಿದ ಕಾರಣಕ್ಕೆ ನಾನು ಜನಪ್ರತಿನಿಧಿಯಾಗಿದ್ದೇನೆ ಎಂದು ಹೇಳಿದರು.

ನಾನು ಉಡುಪಿ-ಚಿಕ್ಕಮಗಳೂರು ಜಿಲ್ಲೆಯವಳಲ್ಲ. ಆದರೂ ನನ್ನನ್ನು ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ಬೆಂಗಳೂರಿನ ಜನ ನನ್ನನ್ನು ಯಶವಂತಪುರದಲ್ಲಿ ಗೆಲ್ಲಿಸಿದರು.. ಮೋದಿಯವರು ನನ್ನನ್ನು ಗುರುತಿಸಿ ಕೆಲಸ ಕೊಟ್ಟಿದ್ದಾರೆ. ಕಾರ್ಯಕರ್ತರೆಲ್ಲರೂ ಕುಣಿದು ಕುಪ್ಪಳಿಸುವ ಫಲಿತಾಂಶ ಬರಲಿದೆ. ನಾವು ಪಾರ್ಟಿ ಏನು ಹೇಳುತ್ತೋ ಅದನ್ನು ಕೇಳುವವರು. ಟಿಕೆಟಿಗಾಗಿ ಅವರು ಇವರು ಓಡಾಡುತ್ತಿದ್ದಾರೆ. ಟಿಕೆಟ್ ಗೆ ಯಾರೇ ಓಡಾಡಲಿ ನನಗೆ ಏನೂ ಸಂಬಂಧ ಇಲ್ಲ ಎಂದು ಹೇಳಿದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

22 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

22 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago