ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯ ಸಿದ್ದತೆ ಮತ್ತು ಪ್ರಚಾರದ ಅಂಗವಾಗಿ, ಕಾಂಗ್ರೆಸ್ ಪಕ್ಷದ ಜನಪರವಾದ ಕಾರ್ಯಕ್ರಮಗಳನ್ನು ತಿಳಿಸಲು ಮತ್ತು ಜನಸ್ಪಂದನದ ರೂಪುರೇಷೆಗಳ ಬಗ್ಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕಾಂಗ್ರೆಸ್ ನ ಪರಿವರ್ತನಾ ಯಾತ್ರೆ ಮತ್ತು ಉಡುಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ನಾಳೆ ದಿನ ಮಾರ್ಚ್ 10ರಂದು ಭಾನುವಾರ ಉಡುಪಿಯ ಕಲ್ಸಂಕ ರಾಯಲ್ ಗಾರ್ಡನ್ ನಲ್ಲಿ ಮಧ್ಯಾಹ್ನ 2.30 ಕ್ಕೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ|ಜಯಮಾಲಾರವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಮತ್ತು ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಎಐಸಿಸಿ ಕಾರ್ಯದರ್ಶಿ ವಿಷ್ಣುನಾದನ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳಾದ ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ, ಬಿಕೆ ಹರಿಪ್ರಸಾದ್, ಸಚಿವರಾದ ಯು ಟಿ ಖಾದರ್, ಮಾಜಿ ಸಚಿವರಾದ ರಮಾನಾಥರ ರೈ, ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಶಾಸಕರಾದ ಗೋಪಾಲ ಭಂಡಾರಿ, ಗೋಪಾಲ ಪೂಜಾರಿ, ಉಡುಪಿ ಉಸ್ತುವಾರಿಯಾಗಿರುವ ಜಿ ಎ ಬಾವಾ, ಮುಖಂಡರಾದ ರಾಕೇಶ್ ಮಲ್ಲಿ, ಉಡುಪಿ ಜಿಲ್ಲಾ ಅಧ್ಯಕ್ಷರಾದ ಅಶೋಕ್ ಕೊಡವೂರು,
ಜಿಲ್ಲಾ ಕಾಂಗ್ರೆಸ್ ನ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಜನಪ್ರತಿನಿಧಿಗಳು ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಈ ಮಹತ್ವದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಪರಿವರ್ತನಾ ಯಾತ್ರೆಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಅತ್ಯಂತ ಯಶಸ್ವಿಗೊಳಿಸುವಂತೆ ಸಚಿವೆ ಡಾ ಜಯಮಾಲಾ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…