Featured

ಉಡುಪಿಯಲ್ಲಿ ನಾಳೆ ಪರಿವರ್ತನಾ ಯಾತ್ರೆ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ – Vishwanews24

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯ ಸಿದ್ದತೆ ಮತ್ತು ಪ್ರಚಾರದ ಅಂಗವಾಗಿ, ಕಾಂಗ್ರೆಸ್ ಪಕ್ಷದ ಜನಪರವಾದ ಕಾರ್ಯಕ್ರಮಗಳನ್ನು ತಿಳಿಸಲು ಮತ್ತು ಜನಸ್ಪಂದನದ ರೂಪುರೇಷೆಗಳ ಬಗ್ಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕಾಂಗ್ರೆಸ್ ನ ಪರಿವರ್ತನಾ ಯಾತ್ರೆ ಮತ್ತು ಉಡುಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ನಾಳೆ ದಿನ ಮಾರ್ಚ್ 10ರಂದು ಭಾನುವಾರ ಉಡುಪಿಯ ಕಲ್ಸಂಕ ರಾಯಲ್ ಗಾರ್ಡನ್ ನಲ್ಲಿ ಮಧ್ಯಾಹ್ನ 2.30 ಕ್ಕೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ|ಜಯಮಾಲಾರವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಮತ್ತು ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಎಐಸಿಸಿ ಕಾರ್ಯದರ್ಶಿ ವಿಷ್ಣುನಾದನ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳಾದ ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ, ಬಿಕೆ ಹರಿಪ್ರಸಾದ್, ಸಚಿವರಾದ ಯು ಟಿ ಖಾದರ್, ಮಾಜಿ ಸಚಿವರಾದ ರಮಾನಾಥರ ರೈ, ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಶಾಸಕರಾದ ಗೋಪಾಲ ಭಂಡಾರಿ, ಗೋಪಾಲ ಪೂಜಾರಿ, ಉಡುಪಿ ಉಸ್ತುವಾರಿಯಾಗಿರುವ ಜಿ ಎ ಬಾವಾ, ಮುಖಂಡರಾದ ರಾಕೇಶ್ ಮಲ್ಲಿ, ಉಡುಪಿ ಜಿಲ್ಲಾ ಅಧ್ಯಕ್ಷರಾದ ಅಶೋಕ್ ಕೊಡವೂರು,

ಜಿಲ್ಲಾ ಕಾಂಗ್ರೆಸ್ ನ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಜನಪ್ರತಿನಿಧಿಗಳು ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಈ ಮಹತ್ವದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಪರಿವರ್ತನಾ ಯಾತ್ರೆಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಅತ್ಯಂತ ಯಶಸ್ವಿಗೊಳಿಸುವಂತೆ ಸಚಿವೆ ಡಾ ಜಯಮಾಲಾ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago