ಉಡುಪಿ: ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಗೆ ಈ ಬಾರಿ ಚುನಾವಣೆಯಲ್ಲಿ ಸೆಡ್ಡು ಹೊಡೆಯಲು ಆರ್‌ಎಸ್‌ಎಸ್ ಪ್ಲಾನ್ ಮಾಡಿದೆ.
ಪ್ರಮೋದ್ ಮಧ್ವರಾಜ್ ಅವರನ್ನು ಹೇಗಾದ್ರೂ ಮಾಡಿ ಕಟ್ಟಿ ಹಾಕಲು ಆರ್‌ಎಸ್‌ಎಸ್ ಸೈಲೆಂಟಾಗಿ ಸ್ಕೆಚ್ ಹಾಕಿದ್ದು, ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಮಹಿಳಾ ಅಭ್ಯರ್ಥಿಯನ್ನು ಇಳಿಸಲು ಮಾಸ್ಟರ್ ಪ್ಲಾನ್ ಮಾಡಿದೆ ಅಂತ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಯನಾ ಗಣೇಶ್ ಗೆ ಬಿಜೆಪಿ ಟಿಕೆಟ್ ಕೊಡಲು ನಿರ್ಧರಿಸಿದೆ. ಮೊಗವೀರ ಸಮುದಾಯದ ನಯನ ಗಣೇಶ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಗೇಮ್ ಪ್ಲಾನ್ ಮಾಡಿದೆ. ಬಿಜೆಪಿ ಹೈಕಮಾಂಡ್ ಗೆ ನಯನ ಗಣೇಶ್ ಅವರ ಹೆಸರನ್ನು ಆರ್‌ಎಸ್‌ಎಸ್ ಸೂಚಿಸಿದೆ. ಈ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದ ಮಹಿಳಾ ಮತದಾರರ ಸೆಳೆಯಲು ಯತ್ನ ಮಾಡಿದೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಮೊಗವೀರ ಮಹಿಳೆಗೆ ಸೀಟ್ ಕೊಟ್ಟರೆ ಕಾಪು, ಕುಂದಾಪುರ, ಬೈಂದೂರು ಕ್ಷೇತ್ರದ ಮೊಗವೀರ ಮತಕ್ಕೂ ಬಲೆ ಬೀಸಲು ಸುಲಭವಾಗುತ್ತದೆ ಎಂಬುದು ಬಿಜೆಪಿಯ ಪ್ಲಾನ್. ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಈಗಾಗಲೇ ಐದಾರು ಹೆಸರು ಸಾಲಿನಲ್ಲಿದೆ. ಇದೀಗ ಮೊದಲ ಬಾರಿಗೆ ನಯನ ಗಣೇಶ್ ಹೆಸರು ಕೇಳಿ ಬಂದಿದೆ. ಕಳಂಕ ರಹಿತರನ್ನು ಇಳಿಸಿದ್ರೆ ಸುಲಭವಾಗಿ ಪ್ರಚಾರಕ್ಕೆ ಹೋಗಬಹುದು. ಎದುರಾಳಿಗೆ ದಾಳಿ ಮಾಡಲು ವಿಷಯಗಳೇ ಇರಬಾರದು ಎಂಬುದು ಬಿಜೆಪಿಯ ವಾದ. ತಳಮಟ್ಟದಲ್ಲಿ ನಾವು ಕ್ಯಾಂಪೇನ್ ಮಾಡುತ್ತೇವೆ ಎಂದು ಆರ್‌ಎಸ್‌ಎಸ್ ಭರವಸೆ ಕೊಟ್ಟಿದೆ ಎಂಬ ಮಾಹಿತಿಯಿದೆ.
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…