Featured

ಉಡುಪಿಯಲ್ಲಿ ಬಿಜೆಪಿ ಹತ್ಯಾ ರಾಜಕಾರಣ ಮಾಡುತ್ತಿದೆ : ಸೊರಕೆ – Vishwanews24

ಉಡುಪಿಯಲ್ಲಿ ಬಿಜೆಪಿ ಹತ್ಯಾ ರಾಜಕಾರಣ ಮಾಡುತ್ತಿದೆ..

ಬಿಜೆಪಿ ಕಾರ್ಯಕರ್ತರನ್ನು ಅವರ ಪಕ್ಷದವರೇ ಕೊಲೆ ಮಾಡುತ್ತಿದ್ದಾರೆ…: ಸೊರಕೆ

ಉಡುಪಿ: ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಬಿಜೆಪಿ ಉಡುಪಿಯಲ್ಲಿ ಹತ್ಯಾ ರಾಜಕಾರಣ ಮಾಡುತ್ತಿದೆ. ಜಿಲ್ಲೆಯಲ್ಲಿ ವಿಚ್ಛಿದ್ರಕಾರಿ ದುರ್ಘಟನೆಗಳು ಹೆಚ್ಚಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯ ಮರ್ಡರ್ ಪಾಲಿಟಿಕ್ಸ್ ಗೆ ಎಡಮೊಗೆ ಕೊಲೆ ಪ್ರಕರಣ ಇದಕ್ಕೆ ಸಾಕ್ಷಿ. ಬಿಜೆಪಿ ಕಾರ್ಯಕರ್ತರನ್ನು ಅವರ ಪಕ್ಷದವರೇ ಕೊಲೆ ಮಾಡುತ್ತಿದ್ದಾರೆ. ಪಂಚಾಯತ್ ನಿಂದ ಆಗುತ್ತಿದ್ದ ತೊಂದರೆಗಳ, ಅಕ್ರಮಗಳ ಬಗ್ಗೆ ಟೀಕಿಸಿದ್ದಕ್ಕೆ ಪಂಚಾಯತ್ ಅಧ್ಯಕ್ಷರೇ ಕೊಲೆ ಮಾಡಿದ್ದಾರೆ. ಈಗಾಗಲೇ ನಾಲ್ಕು ಮಂದಿ ಬಂಧನವಾಗಿದ್ದು, ಇನ್ನಷ್ಟು ಮಂದಿ ಭಾಗಿಯಾದವರಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಮೇಲೆ ಸಾಕಷ್ಟು ಟೀಕೆ ಕೇಳಿ ಬಂದಿತ್ತು. ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಕಾರ್ಯಕರ್ತರು ಕೊಲೆಯಾಗುತ್ತಾರೆ ಎಂದು ಹೇಳಲಾಗುತ್ತಿತ್ತು.

ಕಾಂಗ್ರೆಸ್ ಕೊಲೆಗಳಿಗೆ ಬೆಂಬಲ ಕೊಡುತ್ತಾರೆ ಎಂದು ಪ್ರಚಾರ ಮಾಡಿದರು. ಜಿಲ್ಲೆಯಲ್ಲಿ ಮೂರು ಘಟನೆಯನ್ನು ಮೆಲುಕು ಹಾಕಬೇಕು. ಪ್ರವೀಣ್ ಪೂಜಾರಿ ಕೊಲೆ ಪ್ರಕರಣ, ಕೋಟ ಅವಳಿ ಕೊಲೆ ಪ್ರಕರಣ , ಎಡಮೊಗೆ ಕೊಲೆ ಪ್ರಕರಣ. ಕೊಲೆ ಮಾಡಿದ ಎಲ್ಲಾ ಆರೋಪಿಗಳು ಬಿಜೆಪಿಗೆ ಸೇರಿದವರು. ಎಡಮೊಗೆ ಪ್ರಕರಣದಲ್ಲಿ ಬಿಜೆಪಿ ಪಂಚಾಯತ್ ಅಧ್ಯಕ್ಷನೇ ಮೊದಲ ಆರೋಪಿ. ಸಣ್ಣಪುಟ್ಟ ಘಟನೆಯಾದರೂ ಶೋಭಾ ಕರಂದ್ಲಾಜೆ ದೊಡ್ಡದಾಗಿ ಬಿಂಬಿಸುತ್ತಾರೆ. ರಾಜಕೀಯ ಲಾಭ ಪಡೆಯಲು ಹವಣಿಸುತ್ತಾರೆ. ಇಷ್ಟು ಕೊಲೆಗಳಾದಾಗ ಸಂಸದೆ ಶೋಭಾ ಎಲ್ಲಿದ್ದಾರೆ. ಶೋಭಾ- ಬಿ.ವೈ ರಾಘವೇಂದ್ರ ಸಂತ್ರಸ್ತರ ಮನೆಗೆ ಯಾಕೆ ಭೇಟಿ ಕೊಟ್ಟಿಲ್ಲ. ರಾಜಕೀಯ ಹಸ್ತಕ್ಷೇಪವಿಲ್ಲದ ಆರೋಪಿಗಳಿಗೆ ಶಿಕ್ಷೆಯಾಗಲಿ. ನೊಂದ ಕುಟುಂಬಕ್ಕೆ ನ್ಯಾಯ ಸಿಗಬೇಕು. ಅಧ್ಯಕ್ಷ ಪಂಚಾಯತ್ ಕಚೇರಿಯಲ್ಲಿ ಕುಳಿತುಕೊಳ್ಳಬಾರದು. ಕೊಲೆಗೈದ ಆತನನ್ನು ಶಾಶ್ವತವಾಗಿ ಜೈಲಿಗಟ್ಟಬೇಕು ಎಂದು ಸೊರಕೆ ಹೇಳಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago