ಉಡುಪಿ: ಜಿಲ್ಲಾ ಯೂತ್ ಕಾಂಗ್ರೆಸ್ ನಲ್ಲೀಗ ಅಧ್ಯಕ್ಷ ಗಿರಿಯ ಚುನಾವಣೆಯ ರಂಗು ಕಳೆಗಟ್ಟಿದೆ.. ಜಿಲ್ಲಾ ಯೂತ್ ಕಾಂಗ್ರೆಸ್‍ನಲ್ಲಿ ಈಗ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯ ಇನ್ನೇನು ಒಂದೇ ದಿನ ಬಾಕಿ ಇದೆ ,ಈ ಹಿನ್ನೆಲೆಯಲ್ಲಿ ಅಧ್ಯಕ್ಷಗಿರಿಯ ಚುನಾವಣಾ ಅಂಗಳದಲ್ಲಿ ಐವರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ.
ಈಗಾಗಲೇ ಕಾರ್ಕಳ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ದೀಪಕ್ ಕೋಟ್ಯಾನ್ , ಜಿಲ್ಲಾ ಯೂತ್ ಕಾಂಗ್ರೆಸ್ ನ ಹಾಲಿ ಅಧ್ಯಕ್ಷರಾಗಿರುವ ವಿಶ್ವಾಸ್ ಅಮೀನ್, ಜಿಲ್ಲಾ ಸಾಮಾಜಿಕ ಜಾಲತಾಣದ ಪ್ರದೀಪ್ ಶೆಟ್ಟಿ ನಲ್ಲೂರು, ಕಾರ್ಕಳ ಬ್ಲಾಕ್ ನ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಕೃಷ್ಣ ಶೆಟ್ಟಿ ಹಾಗೂ ಕುಂದಾಪುರದ ಮಹಮ್ಮದ್ ಸಲಾಮ್ ನಡುವೆ ಪೈಪೋಟಿ ನಡೆಯುತ್ತಿದೆ.
ಐವೈಸಿ ಆಪ್ ಮೂಲಕ ಜ.12ರಂದು ಆನ್ಲೈನ್‍ನಲ್ಲಿ ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಮತದಾನ ಪ್ರಕ್ರಿಯೆಯಲ್ಲಿ ಜಿಲ್ಲೆಯ 3,556 ಮತದಾರರಿದ್ದಾರೆ.
ಕಾರ್ಕಳ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ದೀಪಕ್ ಕೋಟ್ಯಾನ್, ಜಿಲ್ಲಾ ಸಾಮಾಜಿಕ ಜಾಲತಾಣದ ಪ್ರದೀಪ್ ಶೆಟ್ಟಿ ನಲ್ಲೂರ್, ಕಾರ್ಕಳ ಬ್ಲಾಕ್ ಯೂತ್ ಕಾಂಗ್ರೆಸ್‌ನ ಉಪಾಧ್ಯಕ್ಷ ಕೃಷ್ಣ ಶೆಟ್ಟಿ ಹಾಗೂ ಕುಂದಾಪುರದ ತೆಕ್ಕಟ್ಟೆಯ ಮಹಮ್ಮದ್ ಸಲಾಮ್ ಅವರುಗಳ ಹೆಸರೂ ಕೂಡ ಪಟ್ಟಿಯಲ್ಲಿವೆ.
ಈ ಪೈಕಿ ಕಾರ್ಕಳ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ದೀಪಕ್ ಕೋಟ್ಯಾನ್ ಅವರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ಮುಂಚೂಣಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ ಈ ಭಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದು ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಇನ್ನಾ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಆಡಳಿತ ಚುಕ್ಕಾಣಿ ಹಿಡಿಯುವಂತೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ನ ಹಾಲಿ ಅಧ್ಯಕ್ಷರಾಗಿರುವ ವಿಶ್ವಾಸ್ ಅಮೀನ್ ಅವರೂ ಈ ಬಾರಿ ಮತ್ತೆ ಅಧ್ಯಕ್ಷೀಯ ಸ್ಥಾನಕ್ಕೆ ಪುನರಾಯ್ಕೆ ಬಯಸಿದ್ದಾರೆ. ಉಡುಪಿ ಜಿಲ್ಲೆಯ ಐದೂ ವಿಧಾನ ಸಭಾ ಕ್ಷೇತ್ರದಲ್ಲಿ ಐವರೂ ಬಿಜೆಪಿ ಶಾಸಕರು ಇದ್ದರೂ ಲಾಕ್ಡೌನ್ ಅವಧಿಯಲ್ಲಿ ಅಕ್ರಮ ಮರಳು ಸಾಗಾಟದ ವಿರುದ್ಧ ಧ್ವನಿ ಎತ್ತಿದ್ದು ಮಾತ್ರವಲ್ಲದೆ ಅಕ್ರಮ ಮರಳುಗಾರಿಕೆ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿದ್ದವರು. ಇದರೊಂದಿಗೆ ಜಿಲ್ಲೆಯಲ್ಲಿ ನಡೆಯುವ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಜಿಲ್ಲಾ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಕಾರ್ಯನಿರ್ವಹಣೆಯಲ್ಲಿ ಸಕ್ರಿಯರಾಗಿರುವ ಪ್ರದೀಪ್ ಶೆಟ್ಟಿ ನಲ್ಲೂರು ಅವರೂ ಈ ಬಾರಿಯ ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಇವರು ಸಾಮಾಜಿಕ ಜಾಲ ತಾಣದ ಮೂಲಕ ಪಕ್ಷ ಸಂಘಟನೆ ಹಾಗೂ ಪಕ್ಷದ ಕಾರ್ಯಕ್ರಮ ಗಳನ್ನು ಜನರಿಗೆ ಮುಟ್ಟಿಸುವ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ.
ಒಟ್ಟಿನಲ್ಲಿ ಐವರ ನಡುವೆ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಯುತ್ತಿದ್ದು ಚುನಾವಣೆ ಗೆದ್ದು ಯಾರು ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನದ ಸಿಂಹಾಸನ ಏರಲಿದ್ದಾರೆ ಎಂಬುದು ಕಾದು ನೋಡಬೇಕಾಗಿದೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…