Featured

ಉಡುಪಿಯಲ್ಲಿ ರಂಗೇರಿದ ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷ ಗಿರಿಯ ಚುನಾವಣೆ ; ಚುನಾವಣಾ ಅಂಗಳದಲ್ಲಿ ಐವರ ನಡುವೆ ಭಾರೀ ಪೈಪೋಟಿ , ಯಾರಾಗಲಿದ್ದಾರೆ ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷ ?? Vishwanews24

ಉಡುಪಿಯಲ್ಲಿ ರಂಗೇರಿದ ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷ ಗಿರಿಯ ಚುನಾವಣೆ ; ಚುನಾವಣಾ ಅಂಗಳದಲ್ಲಿ ಐವರ ನಡುವೆ ಭಾರೀ ಪೈಪೋಟಿ , ಯಾರಾಗಲಿದ್ದಾರೆ ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷ ?? Vishwanews24

ಉಡುಪಿ: ಜಿಲ್ಲಾ ಯೂತ್ ಕಾಂಗ್ರೆಸ್ ನಲ್ಲೀಗ ಅಧ್ಯಕ್ಷ ಗಿರಿಯ ಚುನಾವಣೆಯ ರಂಗು ಕಳೆಗಟ್ಟಿದೆ.. ಜಿಲ್ಲಾ ಯೂತ್ ಕಾಂಗ್ರೆಸ್‍ನಲ್ಲಿ ಈಗ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯ ಇನ್ನೇನು ಒಂದೇ ದಿನ ಬಾಕಿ ಇದೆ ,ಈ ಹಿನ್ನೆಲೆಯಲ್ಲಿ ಅಧ್ಯಕ್ಷಗಿರಿಯ ಚುನಾವಣಾ ಅಂಗಳದಲ್ಲಿ ಐವರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ.

ಈಗಾಗಲೇ ಕಾರ್ಕಳ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ದೀಪಕ್ ಕೋಟ್ಯಾನ್ , ಜಿಲ್ಲಾ ಯೂತ್ ಕಾಂಗ್ರೆಸ್ ನ ಹಾಲಿ ಅಧ್ಯಕ್ಷರಾಗಿರುವ ವಿಶ್ವಾಸ್ ಅಮೀನ್, ಜಿಲ್ಲಾ ಸಾಮಾಜಿಕ ಜಾಲತಾಣದ ಪ್ರದೀಪ್ ಶೆಟ್ಟಿ ನಲ್ಲೂರು, ಕಾರ್ಕಳ ಬ್ಲಾಕ್ ನ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಕೃಷ್ಣ ಶೆಟ್ಟಿ ಹಾಗೂ ಕುಂದಾಪುರದ ಮಹಮ್ಮದ್ ಸಲಾಮ್ ನಡುವೆ ಪೈಪೋಟಿ ನಡೆಯುತ್ತಿದೆ.

ಐವೈಸಿ ಆಪ್ ಮೂಲಕ ಜ.12ರಂದು ಆನ್ಲೈನ್‍ನಲ್ಲಿ ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಮತದಾನ ಪ್ರಕ್ರಿಯೆಯಲ್ಲಿ ಜಿಲ್ಲೆಯ 3,556 ಮತದಾರರಿದ್ದಾರೆ.

ಕಾರ್ಕಳ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ದೀಪಕ್ ಕೋಟ್ಯಾನ್, ಜಿಲ್ಲಾ ಸಾಮಾಜಿಕ ಜಾಲತಾಣದ ಪ್ರದೀಪ್ ಶೆಟ್ಟಿ ನಲ್ಲೂರ್, ಕಾರ್ಕಳ ಬ್ಲಾಕ್ ಯೂತ್ ಕಾಂಗ್ರೆಸ್‌‌ನ‌‌‌‌ ಉಪಾಧ್ಯಕ್ಷ ಕೃಷ್ಣ ಶೆಟ್ಟಿ ಹಾಗೂ ಕುಂದಾಪುರದ ತೆಕ್ಕಟ್ಟೆಯ ಮಹಮ್ಮದ್ ಸಲಾಮ್ ಅವರುಗಳ ಹೆಸರೂ ಕೂಡ ಪಟ್ಟಿಯಲ್ಲಿವೆ.

ಈ ಪೈಕಿ ಕಾರ್ಕಳ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ದೀಪಕ್ ಕೋಟ್ಯಾನ್ ಅವರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ಮುಂಚೂಣಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ ಈ ಭಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದು ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಇನ್ನಾ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಆಡಳಿತ ಚುಕ್ಕಾಣಿ ಹಿಡಿಯುವಂತೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ನ ಹಾಲಿ ಅಧ್ಯಕ್ಷರಾಗಿರುವ ವಿಶ್ವಾಸ್ ಅಮೀನ್ ಅವರೂ ಈ ಬಾರಿ ಮತ್ತೆ ಅಧ್ಯಕ್ಷೀಯ ಸ್ಥಾನಕ್ಕೆ ಪುನರಾಯ್ಕೆ ಬಯಸಿದ್ದಾರೆ. ಉಡುಪಿ ಜಿಲ್ಲೆಯ ಐದೂ ವಿಧಾನ ಸಭಾ ಕ್ಷೇತ್ರದಲ್ಲಿ ಐವರೂ ಬಿಜೆಪಿ ಶಾಸಕರು ಇದ್ದರೂ ಲಾಕ್ಡೌನ್ ಅವಧಿಯಲ್ಲಿ ಅಕ್ರಮ ಮರಳು ಸಾಗಾಟದ ವಿರುದ್ಧ ಧ್ವನಿ ಎತ್ತಿದ್ದು ಮಾತ್ರವಲ್ಲದೆ ಅಕ್ರಮ ಮರಳುಗಾರಿಕೆ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿದ್ದವರು. ಇದರೊಂದಿಗೆ ಜಿಲ್ಲೆಯಲ್ಲಿ ನಡೆಯುವ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಜಿಲ್ಲಾ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಕಾರ್ಯನಿರ್ವಹಣೆಯಲ್ಲಿ ಸಕ್ರಿಯರಾಗಿರುವ ಪ್ರದೀಪ್ ಶೆಟ್ಟಿ ನಲ್ಲೂರು ಅವರೂ ಈ ಬಾರಿಯ ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಇವರು ಸಾಮಾಜಿಕ ಜಾಲ ತಾಣದ ಮೂಲಕ ಪಕ್ಷ ಸಂಘಟನೆ ಹಾಗೂ ಪಕ್ಷದ ಕಾರ್ಯಕ್ರಮ ಗಳನ್ನು ಜನರಿಗೆ ಮುಟ್ಟಿಸುವ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ.

ಒಟ್ಟಿನಲ್ಲಿ ಐವರ ನಡುವೆ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಯುತ್ತಿದ್ದು ಚುನಾವಣೆ ಗೆದ್ದು ಯಾರು ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನದ ಸಿಂಹಾಸನ ಏರಲಿದ್ದಾರೆ ಎಂಬುದು ಕಾದು ನೋಡಬೇಕಾಗಿದೆ.

http://ಅರ್ಹತೆ ಇಲ್ಲದೆಯೂ ಪಿಎಂ ಕಿಸಾನ್ ಯೋಜನೆ ಅಡಿ ಹಣ ಪಡೆದ ರೈತರು ; ಟಾಪ್ 5 ರಾಜ್ಯಗಳಲ್ಲಿ ಕರ್ನಾಟಕ ಐದನೇ ಸ್ಥಾನ -Vishwanews24

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago