ಉಡುಪಿ : ಆಗಸ್ಟ್ 23 ರಂದು ಉಡುಪಿಯ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ರಾಜ್ಯಮಟ್ಟದ ಬ್ರಹ್ಮರ್ಷಿ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜನ್ಮದಿನದ ಕಾರ್ಯಕ್ರಮದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಯೋಜಿಸಲಾಗುತ್ತಿದ್ದು, ಕನ್ನಡ ಮತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲೆಯ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ, ಕೋವಿಡ್ ಮಾರ್ಗಸೂಚಿಯನ್ವಯ ಆಗಸ್ಟ್ 23 ರಂದು ಬೆಳಗ್ಗೆ 9.30 ಕ್ಕೆ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ ನಾರಾಯಣ ಗುರು ಅವರ ತತ್ವ ಆದರ್ಶಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಕಾರ್ಯಕ್ರಮವನ್ನು ಅತ್ಯಂತ ಆಕರ್ಷಕವಾಗಿ ಆಯೋಜಿಸಲಾಗುವುದು ಎಂದರು.
ಕೋವಿಡ್ ಹರಡುವುದನ್ನು ತಡೆಯಲು ಈಗಾಗಲೇ ಹಲವು ನಿರ್ಭಂಧಗಳಿದ್ದು, ಯಾವುದೇ ಮೆರವಣಿಗೆ ಮಾಡಲು ಅವಕಾಶವಿಲ್ಲ ಆದರೆ ಪೂಜಾ ಕಾರ್ಯಕ್ರಮಗಳನ್ನು ನಡೆಸಲು ಯಾವುದೇ ನಿರ್ಭಂದಗಳಿಲ್ಲವಾಗಿದ್ದು, ನಾರಾಯಣ ಗುರು ಅವರ ಪೂಜಾ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಬಿಲ್ಲವ ಸಂಘಗಳಲ್ಲಿ ಆಚರಿಸಬಹುದಾಗಿದೆ ಆದರೆ ಕೋವಿಡ್ ನಿಯಮ ಪಾಲನೆಯೊಂದಿಗೆ ಜಯಂತಿಯನ್ನು ಆಚರಿಸಬೇಕು ಎಂದು ಜಿ.ಜಗದೀಶ್ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ , ಜಿಲ್ಲೆಯ ವಿವಿಧ ಬಿಲ್ಲವ ಸಂಘಟನೆಗಳ ಪಧಾಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…