ಉಡುಪಿ

ಉಡುಪಿಯಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಸಾಂಸ್ಕೃತಿಕ ಹಬ್ಬ : ರೆನೋಲ್ಡ್ ಪ್ರವೀಣ್ ಕುಮಾರ್ – Vishwanews24

ಉಡುಪಿಯಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಸಾಂಸ್ಕೃತಿಕ ಹಬ್ಬ : ರೆನೋಲ್ಡ್ ಪ್ರವೀಣ್ ಕುಮಾರ್

ಉಡುಪಿ(vishwanews24) : ವಕೀಲರ ಸಮುದಾಯದಲ್ಲಿ ಚೈತನ್ಯವನ್ನು ಉತ್ಸಾಹ ಹುರುಪು ತುಂಬಿ ಅವರಲ್ಲಿರುವ ಪ್ರತಿಭೆಗೆ ಸೂಕ್ತ ಅವಕಾಶ ಮತ್ತು ವೇದಿಕೆಯನ್ನು ಒದಗಿಸುವ ನಿಟ್ಟಿನಲ್ಲಿ ಉಡುಪಿ ವಕೀಲರ ಸಂಘವು ಕರ್ನಾಟಕ ರಾಜ್ಯದ ವಿವಿಧ ವಕೀಲರ ಸಂಘಗಳ ಸದಸ್ಯರಿಗಾಗಿ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ಕಲಾ ಸಂಭ್ರಮ” ಪೆಬ್ರವರಿ ೧೦ ಮತ್ತು ೧೧ ರಂದು ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಿರ್ಮಿಸಿರುವ ತೆರೆದ ಸಭಾಂಗಣದಲ್ಲಿ ಆಯೋಜಿಸಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ವಿವಿಧ ವಕೀಲರ ಸಂಘಗಳ 20 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು ಸ್ಪರ್ಧಾಕೂಟದ ಸಮಗ್ರ ವಿಜೇತ ತಂಡಕ್ಕೆ ನಗದು ಮತ್ತು ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು ಅಲ್ಲದೆ ಅತ್ಯುತ್ತಮ ಕಾರ್ಯಕ್ರಮ ನಿರೂಪಣೆ, ವಿಶೇಷ ಪ್ರತಿಭೆ,ಸಮೂಹ ನೃತ್ಯ, ಶಿಸ್ತು ಬದ್ಧ ತಂಡ ಪ್ರದರ್ಶನ,ಸೃಜನಶೀಲ ಪ್ರದರ್ಶನಗಳಿಗೆ ಬಹುಮಾನ ನೀಡಲಾಗುತ್ತದೆ ಎಂದು ವಕೀಲ ಆನಂದ ಮಡಿವಾಳ ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕದ ಉಚ್ಚಾ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ ನೆರವೇರಿಸಲಿದ್ದು ,ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅಧ್ಯಕ್ಷ ವಹಿಸಲಿದ್ದು ಕರ್ನಾಟಕ ನ್ಯಾಯಮೂರ್ತಿಗಳಾದ ಸಿಎಂ ಜೋಶಿ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಅವರು ಉಡುಪಿ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಸಮಾರೋಪ ಫೆಬ್ರವರಿ 11ರಂದು ನಡೆಯಲಿದ್ದು ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಸಮರೋಗೋ ಭಾಷಣ ಮಾಡಲಿದ್ದು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಅಧ್ಯಕ್ಷ ವಹಿಸಲಿರುವರು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾಗಿರುವ ಹರೀಶ್ ಎಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಬಹುಮಾನ ವಿತರಣಾ ಕಾರ್ಯಕ್ರಮವು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಎಆರ್ ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕ್ರೀಡಾ ಕಾರ್ಯದರ್ಶಿ ಸುಮಿತ್ ಎಸ್ ಹೆಗ್ಡೆ ಖಜಾಂಚಿ ಗಂಗಾಧರ ಹೆಚ್ ಎಂ ,ವಿವಿಧ ಉಪಸಮಿತಿಗಳ ಸಂಚಾಲಕರಾದ ಬಿ ನಾಗರಾಜ್ ,ರಾಘವೇಂದ್ರ ಶೆಟ್ಟಿ, ಆನಂದ ಮಡಿವಾಳ , ರವೀಂದ್ರ ಬೈಲೂರು ,ಸತೀಶ್ ಪೂಜಾರಿ ಉಪಸ್ಥಿತರಿದ್ದರು..

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago