ಉಡುಪಿ: ಉಡುಪಿ ಸಂಸ್ಕೃತ ಕಾಲೇಜು ಬಳಿ ಬುಧವಾರ ಸಾಯಂಕಾಲ ದುಷ್ಕೃತ್ಯಕ್ಕೆ ಹೊಂಚುಹಾಕಿದ್ದ ವ್ಯಕ್ತಿ ಹಾಗೂ ರಾತ್ರಿ ಮಲ್ಪೆಯಲ್ಲಿ ಬೋಟ್‌ನಲ್ಲಿ ಸಂಶಯಾತ್ಮಕವಾಗಿ ಸಂಚರಿಸುತ್ತಿದ್ದ 6 ಮಂದಿಯನ್ನು ಬಂಧಿಸುವ ಮೂಲಕ ಪೊಲೀಸರು ಜಿಲ್ಲೆಯಲ್ಲಿ ನಡೆಯುತ್ತಿದ್ದ ದೊಡ್ಡ ಸಂಚನ್ನು ವಿಫಲಗೊಳಿಸಿ¨ªಾರೆ!
ಆದರೆ ಇವರೆಲ್ಲ ನೈಜ ಉಗ್ರರಲ್ಲ…! ಪೊಲೀಸರು. ಇದು ಭಾರತೀಯ ನೌಕಾಪಡೆ, ಭಾರತೀಯ ತಟರಕ್ಷಣಾ ಪಡೆ, ಕರಾವಳಿ ಕಾವಲು ಪಡೆ, ಜಿಲ್ಲಾ ಪೊಲೀಸ್, ಜಿಲ್ಲಾಡಳಿತ, ಬಂದರು ಮತ್ತು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, ಕಸ್ಟಮ್ಸ್ ಹಾಗೂ ಇತರ ಇಲಾಖೆಗಳು ಜಂಟಿಯಾಗಿ ನ. 6 ಮತ್ತು 7ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಸುತ್ತಿರುವ ಸಾಗರ ಕವಚ ಅಣಕು ಕಾರ್ಯಾಚರಣೆ.
ಕಾರ್ಯಾಚರಣೆಯಲ್ಲಿ 200ಕ್ಕೂ ಅಧಿಕ ಪೊಲೀಸ್ ಸಿಬಂದಿ, 27 ಮಂದಿ ಅಧಿಕಾರಿಗಳು ಭಾಗವಹಿಸಿದ್ದು, 15 ಕಡೆಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಪಾಳಿಯಲ್ಲಿ 36 ಗಂಟೆ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ಸ್ಫೋಟಕವಸ್ತುಗಳು ಕಂಡುಬಂದರೆ ನಿಷ್ಕ್ರಿಯಗೊಳಿಸಲು ಡಿಆರ್‌ನಿಂದ 2 ತಂಡ ರಚಿಸಲಾಗಿದ್ದು, ಉಡುಪಿ ಮತ್ತು ಕುಂದಾಪುರದಲ್ಲಿ ನಿಯೋಜಿಸಲಾಗಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…