Featured

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ – vishwanews24

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ

ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ ಸಲ್ದಾನಾ ಅವರು ವಾಣಿಜ್ಯ ಪೈಲಟ್ ಪರವಾನಗಿ ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ.

ಅಸ್ಮಾ ಸಲ್ದಾನಾ ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಕಮರ್ಷಿಯಲ್ ಪೈಲಟ್ ಲೈಸೆನ್ಸ್ (ಸಿಪಿಎಲ್) ಪಡೆದುಕೊಂಡಿದ್ದಾರೆ. ಈಕೆ ಕೌಡೂರು ರಂಗನಪಲೆಯ ನಿವಾಸಿ ಅಶೋಕ್ ಜಾಕೋಬ್ ಸಲ್ದಾನಾ ಮತ್ತು ಮರಿಯಾ ಗ್ರೆಟ್ನಾ ಸಲ್ದಾನಾ ದಂಪತಿಯ ಪುತ್ರಿ.

ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಶಿಕ್ಷಣವನ್ನು ಶೈನಿ ಅವರು ಕಾರ್ಕಳದ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯಲ್ಲಿ ಪೂರ್ಣಗೊಳಿಸಿದ್ದರು. ಬಾಲ್ಯದಿಂದಲೂ ವಿಮಾನಯಾನ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ಶೈನಿ ತನ್ನ ಗುರಿಯನ್ನು ತಲುಪಲು ಕಠಿನ ಹಾದಿ ಆಯ್ಕೆ ಮಾಡಿಕೊಂಡು ಯಶಸ್ಸು ಕಂಡಿದ್ದಾರೆ.

ಪೈಲಟ್ ಕನಸು ನನಸು ಮಾಡಿಕೊಳ್ಳಲು ಶೈನಿ ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಇಂದಿರಾ ಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿ ಪ್ರವೇಶ ಪರೀಕ್ಷೆಯನ್ನು ಬರೆದು ಯಶಸ್ವಿಯಾಗಿ ಉತ್ತೀರ್ಣರಾಗಿದ್ದರು. ನಂತರ 2023ರ ಆಗಸ್ಟ್ ನಿಂದ ಉತ್ತರಪ್ರದೇಶದ ಫುರ್ಸತ್ ಗಂಜ್ ನಲ್ಲಿರುವ ಪ್ರತಿಷ್ಠಿತ ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿಯಲ್ಲಿ ಕಠಿನ ವೃತ್ತಿಪರ ಪೈಲಟ್ ತರಬೇತಿ ಪಡೆದಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

15 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

17 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

18 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

18 hours ago