ಕೋಟ: ಕನ್ನಡ ಚಲನಚಿತ್ರ “ಕಟಕ’ದಲ್ಲಿನ ಅಭಿನಯಕ್ಕಾಗಿ ಬಾಲ ನಟಿ ಶ್ಲಾಘ ಸಾಲಿಗ್ರಾಮಳಿಗೆ ಪ್ರತಿಷ್ಠಿತ ಸೌತ್ ಇಂಡಿಯನ್ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (ಸಿಮಾ) ಲಭಿಸಿದೆ. ಸೆ. 15ರಂದು ದುಬಾೖಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದೆ ಎಂದು ನಟ ಮಾಧವ ಕಾರ್ಕಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ತನ್ನ 4ನೇ ವಯಸ್ಸಿನಲ್ಲಿ ಸಚಿನ್ ಬಸ್ರುರೂ ನಿರ್ದೇಶನದ “ಅಮ್ಮ’ ಆಲ್ಬಮ್ ಸಾಂಗ್‌ನಲ್ಲಿ ನಟಿಸಿ ಮೆಚ್ಚುಗೆ ಗಳಿಸಿದ್ದಳು.ಬಳಿಕ ಸಂಗೀತ ನಿರ್ದೇಶಕ ರವಿ ಬಸ್ರುರೂ ನಿರ್ದೇಶನದ “ಕಟಕ’ ಚಲನಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ ಜನಪ್ರಿಯಳಾಗಿದ್ದಳು.
ಸಾಲಿಗ್ರಾಮದ ನಿವಾಸಿ ಕುಂದಾಪುರದ ಕೆ. ರಾಘವೇಂದ್ರ ಆಚಾರ್ ಮತ್ತು ಮಾಲಾ ದಂಪತಿಯ ಪುತ್ರಿಯಾದ ಈಕೆ 200ಕ್ಕೂ ಹೆಚ್ಚು ನೃತ್ಯ ಪ್ರದರ್ಶನಗಳನ್ನು ನೀಡಿದ್ದಾಳೆ. ಮೂಡುಬಿದಿರೆ ಯಲ್ಲಿ ನಡೆದ “ಬೆಳದಿಂಗಳ ತುಳು ಸಾಹಿತ್ಯ ಸಮ್ಮೇಳನ’ ದಲ್ಲಿ “ಕರ್ನಾಟಕ ಪ್ರತಿಭಾ ರತ್ನ ಪ್ರಶಸ್ತಿ’ ನೀಡಿ ಗೌರವಿಸ ಲಾಗಿದೆ. ಪ್ರಸ್ತುತ ಈಕೆ ತೆಕ್ಕಟ್ಟೆ ವಿಶ್ವ ವಿನಾಯಕ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…