ಉಡುಪಿ: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನರಾದರು.
1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್‌ನ ಉದ್ಯಾವರ ಕ್ಷೇತ್ರದ ಸದಸ್ಯ ರಾಗಿದ್ದ ಇವರು, ಪರಿಷತ್ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ ವಿರುದ್ಧ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡರು. 1994ರಲ್ಲಿ ಎಸ್.ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕ ರಾಗಿ ವಿಧಾನಸಭೆ ಪ್ರವೇಶಿಸಿದರು.
1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆ ಯಾದರು. 2004ರ ಚುನಾವಣೆಯಲ್ಲಿ ಇವರು ರಘುಪತಿ ಭಟ್ ವಿರುದ್ಧ ಪರಾಜಯಗೊಂಡರು. ಅಲ್ಲದೆ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…