ಉಡುಪಿ: ಇಲ್ಲಿನ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶಿರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಬುಧವಾರ ಬೆಳಗ್ಗೆ ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ಶ್ರೀಗಳ ನ್ನು ದಾಖಲಿಸಲಾಗಿತ್ತು. ಅದಾಗಲೇ ಅವರ ಆರೋಗ್ಯ ಬಿಗಡಾಯಿಸಿತ್ತು. ಹೀಗಾಗಿ ಶ್ರೀಗಳನ್ನು ವೆಂಟಿಲೇಟರ್ ನಲ್ಲಿ ಇಡಲಾಗಿತ್ತು.
ಕಳೆದ ಕೆಲ ತಿಂಗಳುಗಳಿಂದ ಶಿರೂರು ಶ್ರೀ ಆಗಾಗ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು.ಈ ಹಿಂದೆ ಥೈರಾಯ್ಡ್ ಸಮಸ್ಯೆ ಇದ್ದಿದ್ದರಿಂದ ಶಿರೂರು ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರದ ದಿನಗಳಲ್ಲಿ ಆಸ್ಪತ್ರೆಗಳಿಗೆ ಆಗಾಗ ತೆರಳುತ್ತಿದ್ದ ಶ್ರೀಗಳ ಆರೋಗ್ಯ ಸ್ಥಿತಿ ದಿನದಿನೇ ಬಿಗಡಾಯಿಸುತ್ತಲಿತ್ತು.
ಚುನಾವಣೆ ಸಂದರ್ಭ ನಿರ್ಜಲೀಕರದಿಂದ ಅಸ್ವಸ್ಥರಾಗಿದ್ದರು. ನಿನ್ನೆ ಬೆಳಗ್ಗೆ ಶ್ರೀಗಳನ್ನು ಕೆಎಂಸಿಗೆ ದಾಖಲಿಸಲಾಗಿತ್ತು. ಅವರು ರಕ್ತವಾಂತಿ ಮಾಡಿದ್ದರಿಂದ ಸಂಜೆಯಿಂದಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ಆಸ್ಪತ್ರೆಯಲ್ಲೇ ವಿಧಿವಶರಾಗಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…