ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಸಮಾಪನ ಹಂತ ತಲುಪಿದೆ. ತಮ್ಮ ಸಂಪೂರ್ಣ ಪರ್ಯಾಯದ ಅವಧಿಯನ್ನು ಭಗವದ್ಗೀತೆಯ ಪ್ರಚಾರಕ್ಕೆ ಬಳಸಿಕೊಂಡ ಶ್ರೀಗಳು ಇದೀಗ ಮತ್ತೊಂದು ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ದೆಹಲಿ ಮೂಲದ ದಾನಿಯೊಬ್ಬರು ನೀಡಿರುವ 2 ಕೋಟಿ ವೆಚ್ಚದ ಚಿನ್ನದ ಭಗವದ್ಗೀತೆ ಕೃಷ್ಣದೇವರಿಗೆ ಸಮರ್ಪಣೆಯಾಗಿದೆ.
ಭಗವದ್ಗೀತೆಯ 18 ಅಧ್ಯಾಯಗಳನ್ನು ಚಿನ್ನದ ಹಾಳೆಗಳಲ್ಲಿ ಬರೆಯಲಾಗಿದೆ. ದೆಹಲಿ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಎಸ್ ಲಕ್ಷ್ಮಿ ನಾರಾಯಣನ್ ಎಂಬವರು ಸುಮಾರು ಎರಡು ಕೋಟಿ ವೆಚ್ಚದಲ್ಲಿ ಈ ಅಪರೂಪದ ಗ್ರಂಥವನ್ನು ಕೃಷ್ಣಮಠಕ್ಕೆ ಕೊಡುಗೆಯಾಗಿ ನೀಡಿದ್ದಾರೆ.
ಕೃಷ್ಣದೇವರಿಗೆ ಸಮರ್ಪಣೆಯ ವೇಳೆ ರಥ ಬೀದಿಯಲ್ಲಿ ಚಿನ್ನದ ಭಗವದ್ಗೀತೆಯ ಮೆರವಣಿಗೆ ನಡೆಯಿತು. ಚಿನ್ನದ ಪಾರ್ಥ ಸಾರಥಿ ರಥದಲ್ಲಿ ಮೆರವಣಿಗೆ ನಡೆಸಲಾಯಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸಹಿತ ಅನೇಕ ಗಣ್ಯರು ಭಾಗವಹಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…