ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು, ಮುಸಲ್ಮಾನ ರಾಜರು : ಮಿಥುನ್ ರೈ – Vishwanews24
ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು, ಮುಸಲ್ಮಾನ ರಾಜರು : ಮಿಥುನ್ ರೈ – ಹಿಂದೂಪರ ಸಂಘಟನೆಗಳ ಆಕ್ರೋಶ
ಉಡುಪಿ : ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಎಂದು ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿಕೆ ನೀಡಿದ್ದು, ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಉಡುಪಿ ಜಿಲ್ಲೆಯ ಮೂಡಬಿದರೆ ತಾಲೂಕಿನ ಪುತ್ತಿಗೆಯಲ್ಲಿ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಮಿಥುನ್ ರೈ ಅವರು, ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು, ಮುಸಲ್ಮಾನ ರಾಜರು ಎಂದು ಹೇಳಿದ್ದಾರೆ.
ಸದ್ಯ ಮಿಥುನ್ ರೈ ಅವರ ಹೇಳಿಕೆಗೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಓಲೈಕೆಗಾಗಿ ಮಿಥುನ್ ರೈ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಸಾವಿರಾರು ದೇವಸ್ಥಾನಗಳನ್ನು ಒಡೆದು ಮಸೀದಿ ಕಟ್ಟಿದ್ದಾರೆ. ಅವರು ಹೇಗೆ ಶ್ರೀಕೃಷ್ಣ ಮಠಕ್ಕೆ ಜಾಗ ಕೊಡುತ್ತಾರೆ ಎಂದು ಹಿಂದೂಪರ ಸಂಘಟನೆಗಳ ಮುಖಂಡರು ಕಿಡಿಕಾರಿದ್ದಾರೆ.
ಉಡುಪಿ : ಕಣ್ಮಣ ಸೆಳೆಯುವಂತೆ ಸಿಂಗಾರಗೊಳ್ಳುತ್ತಿವೆ ಮತಗಟ್ಟೆಗಳು – Vishwanews24
