Featured

ಉಡುಪಿಯ ಸಂತೆಕಟ್ಟೆ ಜಂಕ್ಷನ್ : ಸ್ಕೂಟರ್​ ಮತ್ತು ಕೇರಳ ಬಸ್​ ನಡುವೆ ಭೀಕರ ಅಪಘಾತ: ಗರ್ಭಿಣಿ ಪುತ್ರಿ ಜತೆ ಎಎಸ್​ಐ ಸಾವು – VIshwanews24

ಉಡುಪಿಯ ಸಂತೆಕಟ್ಟೆ ಜಂಕ್ಷನ್ : ಸ್ಕೂಟರ್​ ಮತ್ತು ಕೇರಳ ಬಸ್​ ನಡುವೆ ಭೀಕರ ಅಪಘಾತ: ಗರ್ಭಿಣಿ ಪುತ್ರಿ ಜತೆ ಎಎಸ್​ಐ ಸಾವು – VIshwanews24

ಉಡುಪಿ: ಸ್ಕೂಟರ್​ ಮತ್ತು ಕೇರಳ ಕೆಎಸ್​ಆರ್​ಟಿಸಿ ಬಸ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ಭಿಣಿ ಪುತ್ರಿ ಜತೆ ಎಎಸ್​ಐ ಸಾವು ಮೃತಪಟ್ಟ ಘಟನೆ ಸಂತೆಕಟ್ಟೆ ಜಂಕ್ಷನ್​ನಲ್ಲಿ ಸಂಭವಿಸಿದೆ.

ಗರಡಿಮಜಲು ನಿವಾಸಿ ಕರಾವಳಿ ಕಾವಲು ಪಡೆಯ ಎಎಸ್​ಐ ಗಣೇಶ್​ ಪೈ (58) ಹಾಗೂ ಇವರ ಹಿರಿಯ ಮಗಳು ಗಾಯತ್ರಿ (27) ಮೃತರು.

ಗಾಯತ್ರಿಗೆ ಮೂರು ವರ್ಷದ ಹಿಂದೆ ವಿವಾಹವಾಗಿದ್ದು, ಗಂಡ ಬ್ಯಾಂಕ್​ ಉದ್ಯೋಗಿಯಾಗಿದ್ದಾರೆ. ಸದ್ಯ ಮೂರು ತಿಂಗಳ ಗರ್ಭಿಣಿಯಾಗಿದ್ದ ಅವರು ತವರು ಮನೆಯಲ್ಲಿ ಮಾ.4ರಂದು ನಿಗದಿಯಾಗಿದ್ದ ಸಮಾರಂಭಕ್ಕೆ 2 ದಿನ ಮುಂಚಿತವಾಗಿ ಆಗಮಿಸುತ್ತಿದ್ದರು.

ಬುಧವಾರ ಬೆಳಗ್ಗೆ 5.30ಕ್ಕೆ ಗದಗದಿಂದ ಆಗಮಿಸಿದ್ದ ತಮ್ಮ ಮಗಳನ್ನು ಬಸ್​ ತಂಗುದಾಣದಿಂದ ಮನೆಗೆ ಕರೆದುಕೊಂಡು ಸ್ಕೂಟರ್​ನಲ್ಲಿ ತಂದೆ ಹೋಗುತ್ತಿದ್ದರು. ಈ ವೇಳೆ ಕೇರಳದಿಂದ ಕೊಲ್ಲೂರಿಗೆ ಹೋಗುತ್ತಿದ್ದ ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್​ ಸ್ಕೂಟರ್​ಗೆ ಡಿಕ್ಕಿ ಹೊಡಿದ್ದಿದ್ದು, ತಂದೆ-ಮಗಳು ದುರ್ಮರಣ ಹೊಂದಿದ್ದಾರೆ.

ಘಟನೆಗೆ ಬಸ್​ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ತೀರಾ ಎಡಬದಿಗೆ ಚಲಿಸಿದ ಬಸ್​ ಗಣೇಶ್​ ಪೈ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ತಂದೆ ಮತ್ತು ಮಗಳು ರಸ್ತೆ ಮೇಲೆ ಬಿದ್ದು, ಇಬ್ಬರ ತಲೆಗೂ ಗಂಭೀರ ಗಾಯವಾಗಿತ್ತು. ಗಾಯತ್ರಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಣೇಶ್​ ಪೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago