ಉಡುಪಿ: ರಾಜ್ಯ ಸರಕಾರ ಬಿಜೆಪಿಯ ನಾಯಕ ಸಿ.ಟಿ.ರವಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ವಿಧಾನ ಸೌಧದಲ್ಲಿ ಶಾಸಕರನ್ನು ಯಾವುದೇ ಆದೇಶ , ಸಾಕ್ಷ್ಯಧಾರಗಳಿಲ್ಲದೇ ಬಂದಿಸಿದ ಘಟನೆ ದೇಶದ 70 ವರ್ಷಗಳ ಸ್ವಾತಂತ್ರ್ಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿ ರಾಜ್ಯದಲ್ಲಿ ಗಣಿಸಿದೆ. ಇದು ರಾಜ್ಯ ಸರಕಾರದ ಬರ್ಬರ ಕೃತ್ಯವಾಗಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸಾಂವಿಧಾನಿಕ ಬಿಕ್ಕಟ್ಟು ತಲೆದೋರಿದೆ, ಆದ್ದರಿಂದ ರಾಜ್ಯಪಾಲರು ಮಧ್ಯ ಪ್ರವೇಶಿಸಿ, ರಾಜ್ಯ
ಸರಕಾರವನ್ನು ಬರ್ಕಾಸ್ತುಗೊಳಿಸಬೇಕು. ರಾಜ್ಯ ಸರಕಾರದ ವಕ್ಸ್ ಮೂಡಾ, ವಾಲ್ಮೀಕಿ ನಿಗಮದ ಹಗರಣಗಳನ್ನು ಬಿಜೆಪಿ ಅದರಲ್ಲೂ ವಿಶೇಷವಾಗಿ ಸಿ.ಟಿ.ರವಿ ಹೊರ ಹಾಕುತ್ತಿದ್ದಾರೆ. ಇದರಿಂದ ಕೆರಳಿದ ಕಾಂಗ್ರೆಸ್ ಸರ್ಕಾರ ಅವರ ಮೇಲೆ ಸೇಡು ತೀರಿಸಿಕೊಂಡಿದೆ ಎಂದು ಅವರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನಾಯಕರಾದ ಕಿರಣ್ ಕುಮಾರ್ ಬೈಲೂರು, ಶ್ರೀನಿಧಿ ಹೆಗ್ಡೆ, ಕರಾಂಕ್ ಶಿವಕ್ತಾಯ, ಶ್ಯಾಮಲಾ ಕುಂದರ್, ಶಿಲ್ಪಾ ಸುವರ್ಣ, ಶ್ರೀಕಾಂತ್ ನಾಯಕ್, ಶ್ರೀಕಾಂತ್ ಕಾಮತ್, ಶಿವಕುಮಾರ್, ವಿಜಯಕುಮಾರ್ ಕೊಡವೂರು, ರಾಜೇಶ್ ಕಾವೇರಿ, ಪ್ರಭಾಕರ ಪೂಜಾರಿ, ಪೃಥ್ವಿರಾಜ್ ಶೆಟ್ಟಿ, ಉಮೇಶ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…