Featured

ಉಡುಪಿ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸಾಂವಿಧಾನಿಕ ಬಿಕ್ಕಟ್ಟು ತಲೆದೋರಿದೆ  : ಪ್ರಮೋದ್ ಮಧ್ವರಾಜ್  – vishwanews24

ಉಡುಪಿ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸಾಂವಿಧಾನಿಕ ಬಿಕ್ಕಟ್ಟು ತಲೆದೋರಿದೆ  : ಪ್ರಮೋದ್ ಮಧ್ವರಾಜ್

ಉಡುಪಿ: ರಾಜ್ಯ ಸರಕಾರ ಬಿಜೆಪಿಯ ನಾಯಕ ಸಿ.ಟಿ.ರವಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ  ಶುಕ್ರವಾರ ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ವಿಧಾನ ಸೌಧದಲ್ಲಿ ಶಾಸಕರನ್ನು ಯಾವುದೇ ಆದೇಶ , ಸಾಕ್ಷ್ಯಧಾರಗಳಿಲ್ಲದೇ ಬಂದಿಸಿದ ಘಟನೆ ದೇಶದ 70 ವರ್ಷಗಳ ಸ್ವಾತಂತ್ರ್ಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿ ರಾಜ್ಯದಲ್ಲಿ ಗಣಿಸಿದೆ. ಇದು ರಾಜ್ಯ ಸರಕಾರದ ಬರ್ಬರ ಕೃತ್ಯವಾಗಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸಾಂವಿಧಾನಿಕ ಬಿಕ್ಕಟ್ಟು ತಲೆದೋರಿದೆ, ಆದ್ದರಿಂದ ರಾಜ್ಯಪಾಲರು ಮಧ್ಯ ಪ್ರವೇಶಿಸಿ, ರಾಜ್ಯ
ಸರಕಾರವನ್ನು ಬರ್ಕಾಸ್ತುಗೊಳಿಸಬೇಕು. ರಾಜ್ಯ ಸರಕಾರದ ವಕ್ಸ್ ಮೂಡಾ, ವಾಲ್ಮೀಕಿ ನಿಗಮದ ಹಗರಣಗಳನ್ನು ಬಿಜೆಪಿ ಅದರಲ್ಲೂ ವಿಶೇಷವಾಗಿ ಸಿ.ಟಿ.ರವಿ ಹೊರ ಹಾಕುತ್ತಿದ್ದಾರೆ. ಇದರಿಂದ ಕೆರಳಿದ ಕಾಂಗ್ರೆಸ್ ಸರ್ಕಾರ ಅವರ ಮೇಲೆ ಸೇಡು ತೀರಿಸಿಕೊಂಡಿದೆ ಎಂದು ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನಾಯಕರಾದ ಕಿರಣ್ ಕುಮಾರ್‌ ಬೈಲೂರು, ಶ್ರೀನಿಧಿ ಹೆಗ್ಡೆ, ಕರಾಂಕ್ ಶಿವಕ್ತಾಯ, ಶ್ಯಾಮಲಾ ಕುಂದರ್, ಶಿಲ್ಪಾ ಸುವರ್ಣ, ಶ್ರೀಕಾಂತ್ ನಾಯಕ್, ಶ್ರೀಕಾಂತ್ ಕಾಮತ್, ಶಿವಕುಮಾರ್, ವಿಜಯಕುಮಾರ್ ಕೊಡವೂರು, ರಾಜೇಶ್ ಕಾವೇರಿ, ಪ್ರಭಾಕರ ಪೂಜಾರಿ, ಪೃಥ್ವಿರಾಜ್ ಶೆಟ್ಟಿ, ಉಮೇಶ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago