ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಇದರ ರಾಜ್ಯ ಕಾರ್ಯಕಾರಿಣಿ ಸಭೆಯು ಆ.25 ರಂದು ಶ್ರೀಮಹಾಲಕ್ಷ್ಮಿ ದೇವಸ್ಥಾನ ಉಚ್ಚಿಲದಲ್ಲಿ ರಾಜ್ಯಾಧ್ಯಕ್ಷರಾದ ಡಾ.ಜಯರಾಮ್ ಅಧ್ಯಕ್ಷತೆಯಲ್ಲಿ ನಡೆಯಿತು. ರಾಷ್ಟ್ರೀಯ ಅಧ್ಯಕ್ಷರಾದ ಟಿ ಬಿ ಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು.
ವೇದಿಕೆಯಲ್ಲಿ ಸಾಸ್ ಉಡುಪಿ ಜಿಲ್ಲಾ ಗೌರವಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್ ಗೌರವ ಸಲಹೆಗಾರರ ಆನಂದ್ ಪಿ ಸುವರ್ಣ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ ಸಾಸ್ ದಕ್ಷಿಣ ಪ್ರಾಂತಿಯ ಕಾರ್ಯದರ್ಶಿ ಕೃಷ್ಣಯ್ಯಜಿ ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎನ್ ಎಮ್ ಹೆಗ್ಡೆ ರಾಜ್ಯ ಉಪಾಧ್ಯಕ್ಷ ಸಂಪತ್ ಕುಮಾರ್ ಮಹಿಳಾ ಸಾಸ್ ಜಿಲ್ಲಾಧ್ಯಕ್ಷರಾದ ತಾರಾ ಯು ಆಚಾರ್ಯ ಸಾಸ್ ಕಾವು ತಾಲೂಕ್ ಅಧ್ಯಕ್ಷ ರಘುರಾಮ್ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಗಣೇಶ್ ಪೊದುವಾಲ್ ಉಪಸ್ಥಿತರಿದ್ದರು.
ಸಾಸ್ ಸದಸ್ಯರು ಸೇವಾ ಮನೋಭಾವನೆಯಿಂದ ಬೇರೆ ಬೇರೆ ರಾಜ್ಯದಿಂದ ಬರುವ ಮಾಲಾದಾರಿಗಳಿಗೆ ತಮ್ಮ ತಮ್ಮ ಜಿಲ್ಲೆಗಳಲ್ಲಿ ಯಾವುದೇ ಸಮಸ್ಯೆ ಉಂಟಾದಲ್ಲಿ ಕೂಡಲೇ ಸ್ಪಂದಿಸುವ ಕೆಲಸ ಮಾಡಬೇಕು. ಸ್ವಚ್ಛ ಶಬರಿಮಲೆ ಕರೆ ನೀಡಿದ ಸಂದರ್ಭದಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಗುರುಸ್ವಾಮಿಗಳು ಮತ್ತು ಮಾಲಾಧಾರಿಗಳು ಹಿಂದಿನಿಂದಲೂ ನಡೆದುಕೊಂಡು ಬಂದ ವೃತ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾಗ ಬೇಕು ಇರುಮುಡಿಯಲ್ಲಿ ಪ್ಲಾಸ್ಟಿಕ್ ಬಳಸದಂತೆ ಹಾಗೂ ಮಹಿಳೆಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಈ ಸಂಘಟನೆಯಲ್ಲಿ ಸೇರಿಕೊಳ್ಳುವ ಮೂಲಕ ಅಯ್ಯಪ್ಪ ಧರ್ಮ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳ ಬೇಕೆಂದು ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಉಡುಪಿ ಜಿಲ್ಲೆಯ ಪದಾಧಿಕಾರಿಗಳು ಮತ್ತು ಉಡುಪಿ ಜಿಲ್ಲೆಯಿಂದ ಎಲ್ಲಾ ತಾಲೂಕಿನಿಂದ ಪದಾಧಿಕಾರಿಗಳು ಮತ್ತು ಮಹಿಳಾ ಸಾಸ್ ಪದಾಧಿಕಾರಿಗಳು ಭಾಗವಹಿಸಿದ್ದರು.
ಜಿಲ್ಲಾ ಉಪಾಧ್ಯಕ್ಷರಾದ ವಿಜಯ ಕೊಡವೂರು ಪ್ರಾಸ್ತಾವಿಕ ಮಾತಾಡಿದರು ಪ್ರಧಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ ವಂದಿಸಿದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…