ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಉಡುಪಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಜಿಲ್ಲೆ.
ಮಹಿಳೆಯರಿಗೆ ಗೌರವ ಕೊಡುವ ಜಿಲ್ಲೆ. ಮೂವರು ಹುಡುಗಿಯರ ವರ್ತನೆಯಿಂದ ಜಿಲ್ಲೆ ತಲೆತಗ್ಗಿಸುವಂತಾಗಿದೆ.
ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶೌಚಾಲಯದಲ್ಲಿ ವಿಡಿಯೋ ಕ್ಯಾಮೆರಾ ಇರಿಸಿದ ಕ್ರಮ ಸರಿಯಲ್ಲ. ಇದು ಬ್ಲಾಕ್ ಮೇಲ್ ತಂತ್ರ. ಈ ಕುರಿತು ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಗಮನಕ್ಕೆ ತರುತ್ತೇನೆ.
ಉಡುಪಿ ಜಿಲ್ಲೆಯ ಪೊಲೀಸ್ ಇಲಾಖೆ ಮೇಲೆ ವಿಶ್ವಾಸ ಇದೆ. ವಿಳಂಬ ಮಾಡಿದರೆ ನ್ಯಾಯಕ್ಕಾಗಿ ಹೋರಾಡುತ್ತೇವೆ.
ವಿಡಿಯೋ ಕ್ಲಿಪಿಂಗ್ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸೂಕ್ತ ಕ್ರಮ ಜರುಗಿಸ ಬೇಕು ಎನ್ನುವುದು ನಮ್ಮ ಬೇಡಿಕೆ ಎಂದರು.
ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದ ರಶ್ಮಿ ಸಾಮಂತ್ ಅವರಿಗೆ ಪೊಲೀಸರು ಕಿರುಕುಳ ನೀಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಪೊಲೀಸರು ಆಕೆಯ ಮನೆಗೆ ಹೋಗಿ ವಿಚಾರಣೆ ಮಾಡಿದ್ದಾರೆ.
ರಶ್ಮಿ ಸಾಮಂತ್ ಮನೆಯವರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…