ಉಡುಪಿ: ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ.
ಅದ್ದರಿಂದ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ, ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇ.60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇ. 40 ರಷ್ಟು ಅಂಗ್ಲಭಾಷೆಯಲ್ಲಿ ಪ್ರದರ್ಶಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…