Featured

ಉಡುಪಿ:ಸಾವಿರಾರು ಭಕ್ತರ ಸಮ್ಮುಖದಲ್ಲಿ ಕೃಷ್ಣನಗರಿಯಲ್ಲಿ ಸಂಭ್ರಮದ ಲಕ್ಷದೀಪೋತ್ಸವ -Vishwanews24

ಉಡುಪಿ:ಕೃಷ್ಣನಗರಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ : ಸಾವಿರಾರು ಭಕ್ತರು ಭಾಗಿ -Vishwanews24

ಉಡುಪಿ: ಶುಕ್ರವಾರ ಉತ್ತನ ದ್ವಾದಶಿಯಂದು ಬೆಳಿಗ್ಗೆ ಶ್ರೀ ಕೃಷ್ಣ ಮಠದಲ್ಲಿ ಪ್ರಾರಂಭವಾದ ಮೂರು ದಿನಗಳ ತೆಪ್ಪೊತ್ಸವ ಮತ್ತು ಲಕ್ಷ ದೀಪೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದಾರೆ.

ನವೆಂಬರ್ 27 ಶುಕ್ರವಾರ ಬೆಳಿಗ್ಗೆ, ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯಾ ತೀರ್ಥ ಸ್ವಾಮೀಜಿ ತುಳಸಿಗೆ ಪೂಜೆ ಅರ್ಪಿಸಿದರು. ಸಂಜೆ, ಮಠದ ಹಿರಿಯ ಮತ್ತು ಕಿರಿಯ ಸ್ವಾಮೀಗಳೆಲ್ಲರು ಇಲ್ಲಿನ ರಥ ಬೀದಿಯಲ್ಲಿ ಒಟ್ಟಿಗೆ ಸೇರಿ ದೀಪಗಳ ಹಬ್ಬವಾದ ಲಕ್ಷ ದೀಪೋತ್ಸವವನ್ನು ಆಚರಿಸಿದರು.

ರಥ ಬೀದಿಯಲ್ಲಿ ಮತ್ತು ಸುತ್ತಮುತ್ತ ಒಟ್ಟುಗೂಡಿದ ಸಾವಿರಾರು ಭಕ್ತರು ಎಣ್ಣೆಯಿಂದ ತುಂಬಿದ ದೀಪಗಳನ್ನು ಬೆಳಗಿಸುವ ಮೂಲಕ ಹಬ್ಬವನ್ನು ಸಂತೋಷದಿಂದ ಆಚರಿಸಿದ್ದಾರೆ.

ಶ್ರೀ ಕೃಷ್ಣ ಮಠದ ಕೆರೆಯನ್ನು ದೀಪಗಳಿಂದ ಅಲಂಕರಿಸಲಾಗಿತ್ತು. ಭಗವಂತನ ಉತ್ಸವ ಮೂರ್ತಿಯನ್ನು ಅಲಂಕರಿಸಿದ ತೆಪ್ಪದಲ್ಲಿ ಇರಿಸಿ ಕೆರೆಯ ಸುತ್ತಲೂ ಸಂಗೀತ ವಾದ್ಯಗಳೊಂದಿಗೆ ಕರೆದೊಯ್ಯಲಾಯಿತು, ಬಳಿಕ ಪಲಿಮಾರು ಕಿರಿಯ ಸ್ವಾಮೀಜಿ, ಶ್ರೀ ವಿದ್ಯಾರಾಜೇಶ್ವರ ತೀರ್ಥ, ಉತ್ಸವ ಮೂರ್ತಿಯನ್ನು ರಥದಲ್ಲಿ ಇರಿಸಿದರು, ನಂತರ ಮಹಾ ಪೂಜೆಯನ್ನು ಅರ್ಪಿಸಲಾಯಿತು. ಶೀ ಕೃಷ್ಣನ ಹೆಸರನ್ನು ಜಪಿಸುತ್ತಾ ಭಕ್ತರು ರಥವನ್ನು ಎಳೆದರು.

ರಥಬೀದಿಯಲ್ಲಿ ಮಾತ್ರವಲ್ಲ, ನಗರದ ಇತರ ಪ್ರಮುಖ ಬೀದಿಗಳನ್ನು ಕೂಡ ದೀಪಗಳಿಂದ ಅಲಂಕರಿಸಲಾಗಿತ್ತು. ಉಡುಪಿ ಮೂರು ದಿನಗಳ ಕಾಲ ಸುಂದರವಾದ ದೀಪ ಅಲಂಕಾರ ಮತ್ತು ವಿಶೇಷ ಪೂಜೆಗಳಿಗೆ ಸಾಕ್ಷಿಯಾಗಿದೆ. ಉತ್ಸವದಲ್ಲಿ ದೂರದ ಊರುಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಸೋದೆ ಮಠದ ಶ್ರೀ ವಿಶ್ವ ವಲ್ಲಭ ತೀರ್ಥ ಸ್ವಾಮೀಜಿ ಮತ್ತು ಪುತ್ತಿಗೆ ಮಠದ ಶ್ರೀ ಸುಗುನೇಂದ್ರ ತೀರ್ಥ ಸ್ವಾಮೀಜಿ ಹೊರತುಪಡಿಸಿ ಉಳಿದ ಎಲ್ಲ ಸ್ವಾಮೀಜಿಗಳು ಉತ್ಸವದಲ್ಲಿ ಭಾಗವಹಿಸಿದ್ದರು.

ಪರ್ಯಾಯ ಅದಮಾರು ಮಠದ ಶ್ರೀ ವಿಶ್ವಪ್ರಿಯಾ ತೀರ್ಥ ಸ್ವಾಮೀಜಿ, ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಕೃಷ್ಣಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ಶ್ರೀ ವಿದ್ಯಾಧೀಶ ಸ್ವಾಮೀಜಿ, ಶ್ರೀ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ ಉತ್ಸವದಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago