Featured

ಉಡುಪಿ​: ​ ಕೆಮ್ಮು,​ ಶೀತ, ಜ್ವರ ಚಿಕಿತ್ಸೆ ಪಡೆಯಲು ಬಂದಂತಹ ರೋಗಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಜಿಲ್ಲಾಧಿಕಾರಿ -Vishwanews24

ಉಡುಪಿ​: ​ ಕೆಮ್ಮು,​ ಶೀತ, ಜ್ವರ ಚಿಕಿತ್ಸೆ ಪಡೆಯಲು ಬಂದಂತಹ ರೋಗಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಜಿಲ್ಲಾಧಿಕಾರಿ -Vishwanews24

ಉಡುಪಿ​:ಶೀತ, ಕೆಮ್ಮು, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆಗೆ ಬರುವ ರೋಗಿಗಳಿಗೆ​ ಕಡ್ಡಾಯವಾಗಿ ಕೋವಿಡ್ ಟೆಸ್ಟ್ಗಳನ್ನು ಮಾಡಿಸಬೇಕು, ತಪ್ಪಿದ್ದಲ್ಲಿ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳ​ ನೊಂದಣಿಯನ್ನು ರದ್ದು ಮಾಡಲಾಗು ವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಾ​​ಪ್ರಾಧಿಕಾರದ ಕುಂದುಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.​ ಇತ್ತೀಚಿನ ದಿನ ಗಳಲ್ಲಿ ಜನರು ಕೋವಿಡ್ ಸೋಂಕಿನ ಬಗ್ಗೆ ನಿ​ನಿರ್ಲಕ್ಷ ವಹಿಸುತ್ತಿದ್ದಾರೆ. ಇದರಿಂದಾಗಿ ಎರಡನೇ​ ಅಲೆ ಪ್ರಾರಂಭ ವಾಗುವ ಸಾಧ್ಯತೆಗಳಿವೆ. ಇದಕ್ಕೆ ಕಡಿವಾಣ ಹಾಕಬೇಕು.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೆಮ್ಮು,​ ಶೀತ, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆ ಪಡೆಯಲು ಬಂದಂತಹ ರೋಗಿಗಳಿಗೆ ತಪ್ಪದೇ ಕೋವಿಡ್ ಪರೀಕ್ಷೆ​ ಮಾಡಿಸಬೇಕು. ಖಾಸಗಿ ವೈದ್ಯಕೀಯ ಸಂಸ್ಥೆಗಳು ರೋಗಿಗಳ ಬಗ್ಗೆ ನಿಖರ ಮಾಹಿತಿಯನ್ನು ನೀಡಬೇಕು ಎಂದರು.​ ಜಿಲ್ಲೆಯಲ್ಲಿ ವೈದ್ಯಕೀಯ ವೃತ್ತಿಯನ್ನು ಪ್ರಾರಂಭಿಸುವ ಮುನ್ನ ಜಿಲ್ಲಾ ಮಟ್ಟದ ನೋಂದಣಿ ಪ್ರಾಧಿಕಾರದಲ್ಲಿ​ ನೋಂದಣಿ ಮಾಡಿಸಿ, ತಮ್ಮ ವೃತ್ತಿಯನ್ನು ಕೈಗೊಳ್ಳಬೇಕು. ನೊಂದಣಿ ಮಾಡದೇ ಚಿಕಿತ್ಸೆ ನೀಡಿದವರ ಮೇಲೆ​ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ವಂಶ ಪಾರಂಪರೆಯಾಗಿ ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತಿದ್ದೇವೆ ಎಂಬ ಹೆಸರಿನಲ್ಲಿ ಔಷಧೋಪಚಾರಗಳನ್ನು​ ನೀಡುವಾಗ ಅಲೋಪಥಿ ಮೆಡಿಸನ್ ನೀಡುವುದು ಅಪರಾಧ. ಇಂತಹ ವೃತ್ತಿಗಳು ಕಂಡು​ ​​ಬಂದಲ್ಲಿ ಕಾನೂನು ಅಡಿಯಲ್ಲಿ​ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿ​​ಗಳಿಗೆ ಸೂಚನೆ ನೀಡಿದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago