Featured

ಉಡುಪಿ‌: ‘ಕಟಪಾಡಿಯಲ್ಲಿ ಓವರ್ ಪಾಸ್ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ’ : ಶೋಭಾ ಕರಂದ್ಲಾಜೆ -Vishwanews24

ಉಡುಪಿ‌: ‘ಕಟಪಾಡಿಯಲ್ಲಿ ಓವರ್ ಪಾಸ್ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ’ : ಶೋಭಾ ಕರಂದ್ಲಾಜೆ -Vishwanews24

ಉಡುಪಿ‌,: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ಕ್ಕೆ, ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಪ್ರದೇಶದಲ್ಲಿ ಅಂಡರ್ ಪಾಸಿನ ಅವಶ್ಯಕತೆಯಿದೆ ಎಂದು ಕ್ಷೇತ್ರದ ಜನತೆ ಹಲವಾರು ವರುಷಗಳಿಂದ ಬೇಡಿಕೆಯಿಟ್ಟಿದ್ದರು.

ಕ್ಷೇತ್ರದ ಜನರ ಅಪೇಕ್ಷೆಯಂತೆ, ಕೇಂದ್ರ ಸರಕಾರ ಕಟಪಾಡಿಯಲ್ಲಿ ಅಂಡರ್ ಪಾಸಿನ ಬದಲು, ‘ಓವರ್ ಪಾಸ್’ ನಿರ್ಮಿಸಲು ತಾತ್ವಿಕ ಅನುಮೋದನೆಯನ್ನು ನೀಡಿದ್ದು, ಈ ಯೋಜನೆಯು ಕಾಪು ವಿಧಾನ ಸಭಾ ಕ್ಷೇತ್ರದ ಕಟಪಾಡಿ, ಬಂಟಕಲ್, ಶಿರ್ವ, ಮಟ್ಟು, ಬೆಳ್ಮಣ್ ಪ್ರದೇಶದ ನಿವಾಸಿಗಳಿಗೆ ಸಹಕಾರಿಯಾಗಲಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಹಲವಾರು ಬಾರಿ ಕೇಂದ್ರ ಭೂ ಸಾರಿಗೆ ಸಚಿವರನ್ನು ಭೇಟಿಯಾಗಿ ಕಟಪಾಡಿ ನಗರ ಪ್ರದೇಶವಾಗಿದ್ದು, ಹೆಚ್ಚಿನ ಜನ ಸಂಚಾರವಿರುವ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯನ್ನು ದಾಟಲು ‘ಅಂಡರ್ ಪಾಸಿನ/ಓವರ್ ಪಾಸ್’ ಅನಿವಾರ್ಯತೆಯಿದೆ ಎಂದು ಮನದಟ್ಟು ಮಾಡಲಾಗಿದ್ದು, ಇದೀಗ ಕಟಪಾಡಿಯಲ್ಲಿ ಒವರ್ ಪಾಸ್‌ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಅನುಮೋದನೆ ನೀಡಿದೆ.

ವಿಸ್ತೃತ ಯೋಜನಾ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಯಾರು ಮಾಡುದ್ದು, ಮುಂದಿನ ತಿಂಗಳಲ್ಲಿ ಯೋಜನೆಯ ಪೂರ್ಣ ವಿವರಗಳು ಲಭ್ಯವಾಗಳಿವೆ.

ಇನ್ನು ಜನಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ಕಟಪಾಡಿಯಲ್ಲಿ ಒಟ್ಟು 22.72 ಕೋಟಿಗಳ ವೆಚ್ಚದಲ್ಲಿ ಓವರ್ ಪಾಸ್ ಅನ್ನು ನಿರ್ಮಿಸಲು ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ, ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರಿಗೆ ಸಂಸದೆ ಶೋಭಾ ಕರಂದ್ಲಾಜೆ ಧನ್ಯವಾದಗಳನ್ನು ತಿಳಿಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

11 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

17 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

18 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

18 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago