ಉಡುಪಿ, : ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿರುವ ಈಟ್ ರಿಪೀಟ್ ಎಂಬ ಕಬಾಬ್ ಅಂಗಡಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಇರಿಸಿದ್ದು ಪೊಲೀಸರು 1 ಕೆ.ಜಿ. 50 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕುಂದಾಪುರ ಕವ್ರಾಡಿ ಮಸೀದಿ ಬಳಿಯ ನಿವಾಸಿ ಅಬ್ದುಲ್ ಅಜೀಜ್ (36) ಹಾಗೂ ಕವ್ರಾಡಿ ಜನತಾ ಕಾಲೋನಿಯ ಸಬೀಬ್(25) ಎನ್ನಲಾಗಿದೆ.
ಆರೋಪಿಗಳಾದ ಮಹ್ಮದ್ ತನ್ವೀರ್ ಹಾಗೂ ಸಬೀಬ್ ಅಂಗಡಿಯಲ್ಲಿ 1 ಕೆ.ಜಿ. 50 ಗ್ರಾಂ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಇರಿಸಿಕೊಂಡಿದ್ದು ಕಾರ್ಯಾಚರಣೆ ನಡೆಸಿದ ಪೊಲೀಸರು 1 ಕೆ.ಜಿ. 50 ಗ್ರಾಂ ಗಾಂಜಾ ಮತ್ತು 2 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಒಟ್ಟು ಸೊತ್ತುಗಳ ಮೌಲ್ಯ ಸುಮಾರು 25,000/- ರೂಪಾಯಿ ಎಂದು ಅಂದಾಜಿಸಲಾಗಿದೆ.
ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…