Featured

ಉಡುಪಿ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ – vishwanews24

ಉಡುಪಿ :  ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ

ಉಡುಪಿ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು ಅಂಗನವಾಡಿ ಕಾರ್ಯಕರ್ತೆ-57 ಹಾಗೂ ಅಂಗನವಾಡಿ ಸಹಾಯಕಿಯರು-136 ಗೌರವ ಸೇವೆಯ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್   https://karnemakaone.kar.nic.in/abcd/  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಸ್ಥಳಗಳ ವಿವರ: ಉಡುಪಿ ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರು, ಕುಂದಾಪುರ ತಾಲೂಕಿನಲ್ಲಿ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರು, ಕಾರ್ಕಳ ತಾಲೂಕಿನಲ್ಲಿ 7ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರು ಮತ್ತು ಬ್ರಹ್ಮಾವರ ತಾಲೂಕಿನಲ್ಲಿ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇರುತ್ತವೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

8 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

8 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

8 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

11 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

11 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

11 hours ago