ಉಡುಪಿ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು ಅಂಗನವಾಡಿ ಕಾರ್ಯಕರ್ತೆ-57 ಹಾಗೂ ಅಂಗನವಾಡಿ ಸಹಾಯಕಿಯರು-136 ಗೌರವ ಸೇವೆಯ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ ಸ್ಥಳಗಳ ವಿವರ: ಉಡುಪಿ ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರು, ಕುಂದಾಪುರ ತಾಲೂಕಿನಲ್ಲಿ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರು, ಕಾರ್ಕಳ ತಾಲೂಕಿನಲ್ಲಿ 7ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರು ಮತ್ತು ಬ್ರಹ್ಮಾವರ ತಾಲೂಕಿನಲ್ಲಿ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇರುತ್ತವೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…