Featured

ಉಡುಪಿ: ಅಂಗನವಾಡಿ ಕಾರ್ಯಕರ್ತೆಯರ ಬಾಕಿ ಅನುದಾನ ತುರ್ತಾಗಿ ಬಿಡುಗಡೆಗೆ ಮಾಡುವಂತೆ  ಸಿಎಂಗೆ ಯಶ್ ಪಾಲ್ ಮನವಿ – vishwanews24

ಉಡುಪಿ: ಅಂಗನವಾಡಿ ಕಾರ್ಯಕರ್ತೆಯರ ಬಾಕಿ ಅನುದಾನ ತುರ್ತಾಗಿ ಬಿಡುಗಡೆಗೆ ಮಾಡುವಂತೆ  ಸಿಎಂಗೆ ಯಶ್ ಪಾಲ್ ಮನವಿ

ಉಡುಪಿ: ರಾಜ್ಯ ಸರ್ಕಾರದಿಂದ ಶಾಲಾ ಕಾಲೇಜು ನಿರ್ವಹಣೆ ಅನುದಾನ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಹಲವು ಬಾಕಿ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ನೀಡಲಾಗುವ ನಿರ್ವಹಣಾ ಅನುದಾನ ಬಿಡುಗಡೆಯಾಗದೆ, ಶಾಲಾ-ಕಾಲೇಜುಗಳಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡಲಾಗದೆ ಮೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಸೂಚನೆ ನೀಡಿರುವ ಸನ್ನಿವೇಶ ನಿರ್ಮಾಣವಾಗಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮರ್ಪಕವಾಗಿ ಗೌರವಧನ ಪಾವತಿಯಾಗದೆ ಸಂಕಷ್ಟಕ್ಕೊಳಗಾಗಿದ್ದಾರೆ.ಪ್ರಾಕೃತಿಕ ವಿಕೋಪದಿಂದ ಹಾನಿಯ ಬಗ್ಗೆ ಜಿಲ್ಲಾಡಳಿತವು ಪರಿಶೀಲನೆ ನಡೆಸಿ ಅಂದಾಜು ರೂ. 234 ಕೋಟಿ ನಷ್ಟದ ಕುರಿತು ಸರಕಾರಕ್ಕೆ ವರದಿ ಸಲ್ಲಿಸಿರುತ್ತದೆ. ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ರಸ್ತೆಗಳ, ಚರಂಡಿಗಳ, ಶಾಲೆ-ಅಂಗನವಾಡಿ ಇತ್ಯಾದಿ ಕಟ್ಟಡ ದುರಸ್ತಿಗೆ ಸರಕಾರ ತುರ್ತಾಗಿ ಅನುದಾನ ಬಿಡುಗಡೆ ಮಾಡಬೇಕಾಗಿದೆ.

ರಾಜ್ಯ ಸರಕಾರವು ಕಳೆದ 4 ತಿಂಗಳಿನಿಂದ ಹೈನುಗಾರರಿಗೆ ನೀಡಬೇಕಾದ ಲೀಟರ್ ಒಂದಕ್ಕೆ ರೂ. 5 ಪ್ರೋತ್ಸಾಹ ಧನ ಬಿಡುಗಡೆ ಮಾಡದೆ ಹೈನುಗಾರರು ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದು, ಸದ್ರಿ ಮೊತ್ತವನ್ನು ಏಕ ಕಂತಿನಲ್ಲಿ ಬಿಡುಗಡೆ ಮಾಡಬೇಕು ಮತ್ತು ಸರಕಾರದ ವಿವಿಧ ನಿಗಮ ಮಂಡಳಿಗಳ ಸಿಬ್ಬಂದಿಗಳಿಗೆ ಕಳೆದ 4-6 ತಿಂಗಳುಗಳಿಂದ ವೇತನ ಪಾವತಿಯಾಗದೆ ತೊಂದರೆಗೊಳಗಾಗಿದ್ದು, ತಕ್ಷಣ ನಿಗಮ ಮಂಡಳಿಗಳ ಸಿಬ್ಬಂದಿಗಳ ವೇತನ ಪಾವತಿಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

5 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

7 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

7 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

7 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

7 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

8 hours ago