Featured

ಉಡುಪಿ: ಅಂಗನವಾಡಿ ವಿವಿಧ ಹುದ್ದೆ: ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ – vishwanews24

ಉಡುಪಿ: ಅಂಗನವಾಡಿ ವಿವಿಧ ಹುದ್ದೆ: ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ

    ಉಡುಪಿ: ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 57 ಅಂಗನವಾಡಿ ಕಾರ್ಯಕರ್ತೆ ಹಾಗೂ 136 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್ಸೈಟ್ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ “Application Successfully Uploaded’’’’ ಎಂಬ ಮೇಸೆಜ್ ಅವರುಗಳ ಮೊಬೈಲ್ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 400 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 156 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.

   ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ 2025 ಜನವರಿ 5 ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್ಸೈಟ್ ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಸರ್ಕಾರವು ಆದೇಶಿಸಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಒಂದನೇ ಹಂತಆನ್ಲೈನ್ ತಂತ್ರಾAಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡುವುದು, ಎರಡನೇ ಹಂತತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಅಪ್ಲೋಡ್ ಮಾಡುವುದು, ಮೂರನೇ ಹಂತತಮ್ಮ ದಾಖಲಾತಿಗಳನ್ನು ಅಪ್ಲೋಡ್ ಮಾಡುವುದು ಹಾಗೂ ನಾಲ್ಕನೇ ಹಂತತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಬೇಕು.

  ಅಪೂರ್ಣವಾದ ಅರ್ಜಿಗಳ ಅರ್ಜಿ ಸಂಖ್ಯೆ ಹಾಗೂ ಇತರೆ ವಿವರಗಳನ್ನೊಳಗೊಂಡ ಮಾಹಿತಿಯು ಸಂಬAಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago