ಉಡುಪಿ: ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ – Vishwanews24

Featured, ಉಡುಪಿ

ಉಡುಪಿ: ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ,: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಸೌತ್ ಶಾಲೆ, ಪಡುನಿಟ್ಟೂರು, ಮೂಳೂರು ಯು.ಬಿ.ಎಂ.ಸಿ, ಅಲೆವೂರು, ಕಂಪನಬೆಟ್ಟು, ಕುತ್ಯಾರು

ಪಂಚಾಯತ್ ಬಳಿ, ಪಾಂಗಾಳಗುಡ್ಡೆ ಹಾಗೂ ಮಿತ್ರಬೆಟ್ಟು ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ 18 ರಿಂದ 35
ವರ್ಷದೊಳಗಿನ, ಕನಿಷ್ಠ 4 ನೇ ತರಗತಿ ಮತ್ತು ಗರಿಷ್ಠ 9 ನೇ ತರಗತಿ ತೇರ್ಗಡೆಯಾದ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ
ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in ಅನ್ನು
ಸಂಪರ್ಕಿಸುವAತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply